ನ್ಯೂಯಾರ್ಕ್: ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರ ತಂತ್ರಜ್ಞಾನದ ರಾಯಭಾರಿಯಾಗಿ ಅಮನ್ ದೀಪ್ ಸಿಂಗ್ ಗಿಲ್ ಅವರನ್ನು ನೇಮಿಸಲಾಗಿದೆ.
ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಯವರ ತಂತ್ರಜ್ಞಾನದ ರಾಯಭಾರಿಯಾಗಿ ಭಾರತದ ಅಮನ್ ದೀಪ್ ನೇಮಕ
0
ಜೂನ್ 12, 2022
Tags
ನ್ಯೂಯಾರ್ಕ್: ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರ ತಂತ್ರಜ್ಞಾನದ ರಾಯಭಾರಿಯಾಗಿ ಅಮನ್ ದೀಪ್ ಸಿಂಗ್ ಗಿಲ್ ಅವರನ್ನು ನೇಮಿಸಲಾಗಿದೆ.
ಸದ್ಯ ಭಾರತೀಯ ರಾಜತಾಂತ್ರಿಕ ಹಿರಿಯ ಅಧಿಕಾರಿಯಾಗಿರುವ ಅಮನ್ ದೀಪ್ ಅವರಿಗೆ ಈ ಸ್ಥಾನ ಒಲಿದುಬಂದಿದೆ.
ಸುಸ್ಥಿರ ಅಭಿವೃದ್ಧಿಯಲ್ಲಿ ಪ್ರಗತಿ ಹಾಗೂ ಪರಿಣಾಮಕಾರಿ ಡಿಜಿಟಲ್ ತಂತ್ರಜ್ಞಾನದಲ್ಲಿ ಹೆಚ್ಚು ಜ್ಞಾನ ಹೊಂದಿರುವ ಅಮನ್ ದೀಪ್ ಅವರನ್ನು ಡಿಜಿಟಲ್ ತಂತ್ರಜ್ಞಾನ ಕುರಿತ ಚಿಂತನೆಯ ನಾಯಕ ಎಂದು ವಿಶ್ವಸಂಸ್ಥೆ ಬಣ್ಣಿಸಿದೆ.
ಸದ್ಯ ಆಂಟೋನಿಯೊ ಗುಟೆರೆಸ್ ತಂತ್ರಜ್ಞಾನ ರಾಯಭಾರಿಯಾಗಿ ಸೇವೆ ಸಲ್ಲಿಸಲಿದ್ದಾರೆ. ಪಂಜಾಬ್ ವಿವಿಯಿಂದ ಎಲೆಕ್ಟ್ರಾನಿಕ್ಸ್ ಮತ್ತು ಎಲೆಕ್ಟ್ರೀಕಲ್ ಕಮ್ಯೂನಿಕೇಷನ್ ತಂತ್ರಜ್ಞಾನದಲ್ಲಿ ಪದವಿ ಪಡೆದಿರುವ ಗಿಲ್, ಲಂಡನ್ ನ ಕಿಂಗ್ಸ್ ಕಾಲೇಜಿನಿಂದ ಪಿಹೆಚ್ ಡಿ ಪದವಿ ಪಡೆದಿದ್ದಾರೆ. ಜಿನಿವಾ ವಿವಿಯಿಂದ ಫ್ರೆಂಚ್ ಇತಿಹಾಸ ಮತ್ತು ಭಾಷೆಯಲ್ಲಿ ಡಿಪ್ಲೋಮಾ ಪಡೆದಿದ್ದಾರೆ.