ಚಂಡೀಗಡ: ಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣ ದುರದೃಷ್ಟಕರ ಎಂದು ಹೇಳಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಇದನ್ನು ರಾಜಕೀಯಗೊಳಿಸಬಾರದು ಎಂದು ಮನವಿ ಮಾಡಿದ್ದಾರೆ.
ಚಂಡೀಗಡ: ಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣ ದುರದೃಷ್ಟಕರ ಎಂದು ಹೇಳಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಇದನ್ನು ರಾಜಕೀಯಗೊಳಿಸಬಾರದು ಎಂದು ಮನವಿ ಮಾಡಿದ್ದಾರೆ.
ಆಮ್ ಆದ್ಮಿ ಪಕ್ಷ (ಎಎಪಿ) ನೇತೃತ್ವದ ಪಂಜಾಬ್ ಸರ್ಕಾರವು ಪೊಲೀಸ್ ಭದ್ರತೆಯನ್ನು ವಾಪಸ್ ಪಡೆದ ಮರುದಿನವೇ (ಮೇ 29) ದುಷ್ಕರ್ಮಿಗಳ ಗುಂಡೇಟಿನಿಂದ ಮೂಸೆವಾಲಾ ಹತ್ಯೆಗೀಡಾಗಿದ್ದರು.
: ಮೂಸೆವಾಲ ಕೊಂದವರು ನಮ್ಮವರೇ: ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಬಿಷ್ಣೋಯ್ ಮಾಹಿತಿ
ಪಂಜಾಬ್‌ನಲ್ಲಿ ನಡೆದ ಈ ಎಲ್ಲ ಘಟನೆಗಳನ್ನು ರಾಜಕೀಯಗೊಳಿಸಬಾರದು. ಸಿಧು ಮೂಸೆವಾಲಾ ಅವರ ಹತ್ಯೆ ಪ್ರಕರಣ ನಿಜಕ್ಕೂ ದುರದೃಷ್ಟಕರ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಮೂಸೆವಾಲಾ ಹಂತಕರನ್ನು ಶೀಘ್ರದಲ್ಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಪಂಜಾಬ್ ಸಿಎಂ ಈಗಾಗಲೇ ಭರವಸೆ ನೀಡಿದ್ದಾರೆ ಎಂದು ಕೇಜ್ರಿವಾಲ್ ಉಲ್ಲೇಖಿಸಿದರು.