ಕಾಸರಗೋಡು: ಕಾಸರಗೋಡು ಜಿಲ್ಲಾ ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್ ಸೇವಾ ಸಂಘದ 89 ನೇ ಮಹಾಸಭೆ ಬೀರಂತಬೈಲಿನ ಶ್ರೀ ಭಿಕ್ಷು ಲಕ್ಷ್ಮಣಾನಂದ ಸ್ವಾಮೀಜಿ ಸ್ಮಾರಕ ಸಮಾಜ ಭವನದಲ್ಲಿ ನಡೆಯಿತು.
ಜಿಲ್ಲಾ ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್ ಸೇವಾ ಸಂಘದ ಅಧ್ಯಕ್ಷ ಕಮಲಾಕ್ಷ ಕಲ್ಲುಗದ್ದೆ ಅಧ್ಯಕ್ಷತೆ ವಹಿಸಿದರು. ಸಂಘದ ಗೌರವ ಕಾರ್ಯದರ್ಶಿ ಬಿ.ಪಿ.ವೆಂಕಟ್ರಮಣ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಘದ ಗೌರವ ಅಧ್ಯಕ್ಷ ನಿರಂಜನ ಕೊರಕೋಡು, ಜಿಲ್ಲಾ ಮಹಿಳಾ ಸಂಘದ ಗೌರವಾಧ್ಯಕ್ಷೆ ಆಶಾ ರಾಧಾಕೃಷ್ಣ, ಅಧ್ಯಕ್ಷೆ ಉಷಾ ನವೀನ್ ಅಣಂಗೂರು, ಯುವ ಸಂಘದ ಅಧ್ಯಕ್ಷ ಅಕ್ಷತ್, ಕಾರ್ಯದರ್ಶಿಗಳು, ವಿವಿಧ ಉಪಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಕಾಸರಗೋಡು ಜಿಲ್ಲಾ ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್ ಸೇವಾ ಸಂಘಕ್ಕೆ 90 ವರ್ಷದ ಹಿನ್ನೆಲೆಯಲ್ಲಿ ಡಿಸೆಂಬರ್ ತಿಂಗಳಲ್ಲಿ ಎರಡು ದಿನಗಳ ಸಮಾವೇಶ ನಡೆಸಲು ತೀರ್ಮಾನಿಸಲಾಯಿತು.
ಸಂಘದ ಕೋಶಾಧಿಕಾರಿ ಸತೀಶ್ ಮಾಸ್ತರ್ ಕೂಡ್ಲು ಲೆಕ್ಕಪತ್ರ ಮಂಡಿಸಿ, ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಸತೀಶ್ ದೋಣಿಬಾಗಿಲು ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಪ್ರೇಮ್ ಕಿಶೋರ್ ಕೆ. ವಂದಿಸಿದರು. ಕೊನೆಯಲ್ಲಿ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.