ನಾಡಿಯಾ: ಪ್ರವಾದಿ ಮೊಹಮ್ಮದ್ ಪೈಗಂಬರರ ಕುರಿತು ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಅವರ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಉದ್ರಿಕ್ತ ಗುಂಪೊಂದು ಭಾನುವಾರ ಪಶ್ಚಿಮ ಬಂಗಾಳದಲ್ಲಿ ರೈಲೊಂದರ ಮೇಲೆ ದಾಳಿ ನಡೆಸಿದೆ.
ಬೆಥುವಹರಿ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ರೈಲೊಂದರ ಮೇಲೆ ದಾಳಿ ನಡೆಸಿ, ಹಾನಿಯುಂಟು ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದಾಗ್ಯೂ, ಯಾವುದೇ ಹಾನಿ ಕುರಿತು ತಕ್ಷಣದ ಮಾಹಿತಿ ತಿಳಿದುಬಂದಿಲ್ಲ.
ನೂಪುರ್ ಶರ್ಮಾ ಅವರ ಬಂಧನಕ್ಕೆ ಒತ್ತಾಯಿಸಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕರರನ್ನು ಚದುರಿಸಲು ಪೊಲೀಸರು ಮುಂದಾದಾಗ, ಕೆಲವರು ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದು, ಪ್ಲಾಟ್ ಫಾರಂನಲ್ಲಿ ನಿಂತಿದ್ದ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಉದ್ರಿಕ್ತರು ರೈಲಿನ ಮೇಲೆ ದಾಳಿ ನಡೆಸಿದ್ದರಿಂದ ಲಾಲ್ ಗೊಲಾ ಮಾರ್ಗದಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಯಿತು ಎಂದು ಅವರು ಹೇಳಿದ್ದಾರೆ.