ಮಂಜೇಶ್ವರ: ಮುಡೂರು ತೋಕೆ ಎಸ್.ಎಸ್.ಎ. ಎಲ್.ಪಿ.ಶಾಲಾ 2022ನೇ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವವು ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಾರ್ಡ್ ಸದಸ್ಯ ಶಿವರಾಜ್ ರವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಅಕಾಡಮಿಕ್ ವಾರ್ಷಿಕ ಯೋಜನೆ ಬಿಡುಗಡೆಗೊಳಿಸಲಾಯಿತು. ಶಾಲಾ ಪ್ರಬಂಧಕ ದೇವಪ್ಪ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರ್ ಸಿದ್ದಿಕ್ ಶುಭಹಾರೈಸಿದರು. ಶಾಲಾ ಮುಖ್ಯಶಿಕ್ಷಕ ಶೈಲೇಶ್ ಸ್ವಾಗತಿಸಿ, ಶಿಕ್ಷಕಿ ಲಾವಣ್ಯ ವಂದಿಸಿದರು. ಅಧ್ಯಾಪಿಕೆ ಚಿತ್ರಾ ನಿರೂಪಿಸಿದರು.