ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಮಹತ್ವದ ಸಭೆಗೂ ಮುನ್ನ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಅವರು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ರಾಷ್ಟ್ರಪತಿ ಚುನಾವಣೆಯು ಜುಲೈ 18ರಂದು ನಡೆಯಲಿದೆ. ಚುನಾವಣೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಇದೇ ದಿನ (ಮಂಗಳವಾರ) ಸಂಸದೀಯ ಪಕ್ಷದ ಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ವರ್ಚುವಲ್ ಆಗಿ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
ಅದಕ್ಕೂ ಮುನ್ನ ಬಿಜೆಪಿ ನಾಯಕರು ನಾಯ್ಡು ಜೊತೆ ನಡೆಸಿರುವ ಮಾತುಕತೆ ಮಹತ್ವ ಪಡೆದುಕೊಂಡಿದೆ.
ಚುನಾವಣೆ ಸಂಬಂಧ ಪಕ್ಷದ ಕಾರ್ಯತಂತ್ರದ ಕುರಿತು ಚರ್ಚಿಸಲು ನಡ್ಡಾ ಅವರು ಪಕ್ಷದ 14 ಸದಸ್ಯರನ್ನೊಳಗೊಂಡ ಉಸ್ತುವಾರಿ ಸಮಿತಿಯೊಂದಿಗೆ ಸೋಮವಾರ ಸಭೆ ನಡೆಸಿದ್ದರು.