ತಿರುವನಂತಪುರ: ರಾಜ್ಯದಲ್ಲಿ ಇಂದು ಮಳೆಯ ವೇಗ ಕಡಿಮೆಯಾಗಿದ್ದರೂ ಮುಂದಿನ ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಚ್ಚರಿಕೆಯ ಆಧಾರದ ಮೇಲೆ ಇಂದು 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರ ಮತ್ತು ಕೊಲ್ಲಂ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಮಳೆ ಮುಂದುವರಿದಿದ್ದು, ಜನರು ಎಚ್ಚರದಿಂದ ಇರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಹವಾಮಾನ ಇಲಾಖೆ ಪ್ರಕಾರ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಇದರ ಆಧಾರದ ಮೇಲೆ ಮುಂದಿನ ದಿನಗಳಲ್ಲಿಯೂ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ನಾಳೆಯೂ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಾಳೆಯೂ 12 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರ ಮತ್ತು ಕೊಲ್ಲಂ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಅಲರ್ಟ್ ಇರಲಿದೆ.
ಭಾನುವಾರದ ಬಳಿಕ ಮುಂಗಾರು ದುರ್ಬಲಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಭಾನುವಾರ ಐದು ಜಿಲ್ಲೆಗಳಲ್ಲಿ ಮಾತ್ರ ಮಳೆಯ ಎಚ್ಚರಿಕೆ ನೀಡಲಾಗಿದೆ.
ಮಲಪ್ಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಸೋಮವಾರವೂ ಮಲಪ್ಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಭಾರಿ ಮಳೆಯ ಸಂದರ್ಭದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯುವಂತಿಲ್ಲ. ಕೇರಳ, ಲಕ್ಷದ್ವೀಪ ಮತ್ತು ಕರ್ನಾಟಕದ ಕರಾವಳಿ ತೀರದಲ್ಲಿ ಮೀನುಗಾರಿಕೆಗೆ ತೆರಳದಂತೆ ಸೂಚಿಸಲಾಗಿದೆ.