ನವದೆಹಲಿ :ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ಕನಿಷ್ಠ 130 ಹಳ್ಳಿಗಳಲ್ಲಿ 128 ಗ್ರಾಮಗಳೊಂದಿಗಿನ ಸಂಪರ್ಕ ಕಡಿತಗೊಂಡಿದೆ ಎಂದು ವರದಿಗಳು ತಿಳಿಸಿವೆ.
ನವದೆಹಲಿ :ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ಕನಿಷ್ಠ 130 ಹಳ್ಳಿಗಳಲ್ಲಿ 128 ಗ್ರಾಮಗಳೊಂದಿಗಿನ ಸಂಪರ್ಕ ಕಡಿತಗೊಂಡಿದೆ ಎಂದು ವರದಿಗಳು ತಿಳಿಸಿವೆ.
ಮಹಾರಾಷ್ಟ್ರ ಮಾತ್ರವಲ್ಲದೆ ದಕ್ಷಿಣದ ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳಲ್ಲಿಯೂ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮಧ್ಯ ಭಾರತ ಹಾಗೂ ಪಶ್ಚಿಮ ಕರಾವಳಿಯಲ್ಲಿ ಸಕ್ರಿಯ ಮಾನ್ಸೂನ್ ಪರಿಸ್ಥಿತಿಗಳು ಮುಂದಿನ ಐದು ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಥವಾ ಐಎಂಡಿ ಪ್ರಕಟಣೆಯಲ್ಲಿ ತಿಳಿಸಿದೆ.
ಹವಾಮಾನ ಇಲಾಖೆ ಪ್ರಕಾರ ಶನಿವಾರ ತೆಲಂಗಾಣ, ಕರಾವಳಿ ಆಂಧ್ರಪ್ರದೇಶ, ಗುಜರಾತ್‌ನ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಿದೆ. ಉತ್ತರಾಖಂಡ, ಪೂರ್ವ ಉತ್ತರ ಪ್ರದೇಶ, ಒಡಿಶಾ, ಗೋವಾ, ಮರಾಠವಾಡ, ಮಧ್ಯ ಮಹಾರಾಷ್ಟ್ರ, ಛತ್ತೀಸ್‌ಗಢ, ಮಧ್ಯಪ್ರದೇಶ, ಕೇರಳ ಹಾಗೂ ಕರ್ನಾಟಕದಲ್ಲಿ ಭಾರೀ ಮಳೆಯಾಗಿದೆ ಎಂದು ಅದು ಹೇಳಿದೆ.