ನೋನಿ : ಮಣಿಪುರದ ನೋನಿ ಜಿಲ್ಲೆಯಲ್ಲಿನ ಸೇನಾ ಶಿಬಿರದ ಸಮೀಪ ಭೀಕರ ಭೂಕುಸಿತ ಉಂಟಾಗಿದೆ. ಭಾರಿ ಮಳೆಯಿಂದಾಗಿ ರಾತ್ರಿ ದಿಢೀರನೆ ಗುಡ್ಡ ಬಿರುಕು ಬಿಟ್ಟಿದ್ದು, ಭಾರತೀಯ ಸೇನೆಯ ಶಿಬಿರ ಧ್ವಂಸಗೊಂಡಿತು. ಘಟನೆಯಲ್ಲಿ 7 ಸೇನಾ ಸಿಬ್ಬಂದಿ ಸೇರಿದಂತೆ 14 ಜನರು ಮೃತಪಟ್ಟಿದ್ದಾರೆ.

ಮಣಿಪುರದ ನೋನಿ ಜಿಲ್ಲೆಯಲ್ಲಿ ಇಂಫಾಲ್-ಜಿರಿಬಾಮ್ ರೈಲು ಮಾರ್ಗದ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಇದಕ್ಕಾಗಿ ಸೇನಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಇವರೆಲ್ಲಾ ಮೃತ ದುರ್ದೈವಿಗಳು. 23 ಜನರನ್ನು ಸ್ಥಳಾಂತರಿಸಲಾಗಿದೆ. ಸೇನಾ ಸಿಬ್ಬಂದಿ, ರೈಲ್ವೆ ನೌಕರರು, ಗ್ರಾಮಸ್ಥರು ಮತ್ತು ಕಾರ್ಮಿಕರು ಸೇರಿದಂತೆ ಸುಮಾರು 60 ಮಂದಿ ಸಿಕ್ಕಿಬಿದ್ದಿರುವ ಶಂಕೆ ಇದೆ. 13 ಯೋಧರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಭೂಕುಸಿತದಿಂದ ಟೆರಿಟೋರಿಯಲ್ ಆರ್ಮಿಯ 107 ಕಂಪನಿಗಳು ಹಾನಿಗೀಡಾಗಿವೆ. ಪ್ರಧಾನಿ ನರೇಂದ್ರ ಮೋದಿಯವರು ರಕ್ಷಣಾ ಕಾರ್ಯಾಚರಣೆಯ ಮೇಲೆ ನಿಗಾ ಇಟ್ಟಿದ್ದಾರೆ.
ಸೇನೆಯ ಪ್ರಕಾರ, ಪ್ರತಿಕೂಲ ಹವಾಮಾನ ಮತ್ತು ಪದೇ ಪದೇ ಭೂಕುಸಿತ ಸಂಭವಿಸುತ್ತಿರುವುದರಿಂದ ರಕ್ಷಣಾ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರುತ್ತಿದೆ. ಆದರೆ ನಾಪತ್ತೆಯಾಗಿರುವ ಯೋಧರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ವರದಿಯಾಗಿದೆ.