ಕಾಸರಗೋಡು: ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಸುಪ್ರೀಂ ಕೋರ್ಟ್ ತೀರ್ಪಿನಂತೆ ಮೇ ತಿಂಗಳಿಂದ ಜುಲೈ 8 ರವರೆಗೆ 4956 ಜನರಿಗೆ 195.76ಕೋಟಿ ರೂ. ವಿತರಿಸಲಾಗಿದೆ. ಎಂಡೋಸಲ್ಫಾನ್ ಸಂತ್ರಸ್ತರ ಪಟ್ಟಿಯಲ್ಲಿ ಹೆಸರು ಒಳಪಟ್ಟಿದ್ದು, ಇನ್ನೂ ಅರ್ಜಿ ಸಲ್ಲಿಸದ ಒ.ಪಿ. ನಂಬರ್ ಲಭಿಸಿರುವ ವ್ಯಕ್ತಿಗಳು ಅಗತ್ಯ ದಾಖಲೆಗಳೊಂದಿಗೆ ಶೀಘ್ರ ಅಕ್ಷಯ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಪಟ್ಟಿಯಲ್ಲಿರುವ ವ್ಯಕ್ತಿಗಳು ಮೃತಪಟ್ಟಿದ್ದರೆ, ಅವರ ವಾರಸುದಾರರು ಅಗತ್ಯ ದಾಖಲೆಗಳೊಂದಿಗೆ ಅಕ್ಷಯ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯು ಆಯಾ ಗ್ರಾಮ ಕಚೇರಿಗಳಿಂದ ಲಭ್ಯವಿರುವುದಾಗಿ ಪ್ರಕಟಣೆ ತಿಳಿಸಿದೆ.