ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ₹ 198ರಷ್ಟು ಕಡಿಮೆ ಮಾಡಲಾಗಿದೆ. ಹೋಟೆಲ್, ರೆಸ್ಟೋರೆಂಟ್‌ಗಳು, ಟೀ ಅಂಗಡಿಗಳಿಗೆ ಇದರಿಂದ ನೆರವಾಗಲಿದೆ.
ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ₹ 198ರಷ್ಟು ಕಡಿಮೆ ಮಾಡಲಾಗಿದೆ. ಹೋಟೆಲ್, ರೆಸ್ಟೋರೆಂಟ್‌ಗಳು, ಟೀ ಅಂಗಡಿಗಳಿಗೆ ಇದರಿಂದ ನೆರವಾಗಲಿದೆ.
ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳ ಅಧಿಸೂಚನೆಯ ಪ್ರಕಾರ, ದೆಹಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಎಲ್‌ಪಿಜಿ ಸಿಲಿಂಡರ್ ದರ ₹ 2,219 ರಿಂದ ₹ 2,021ಕ್ಕೆ ಇಳಿಕೆ ಆಗಿದೆ. ಸ್ಥಳೀಯ ಮಾರಾಟ ತೆರಿಗೆಗೆ ಅನುಗುಣವಾಗಿ ರಾಜ್ಯದಿಂದ ರಾಜ್ಯಕ್ಕೆ ಬೆಲೆಯಲ್ಲಿ ವ್ಯತ್ಯಾಸ ಆಗುತ್ತದೆ.