ನಾಟಿಂಗ್ ಹ್ಯಾಮ್: ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಅಂತಿಮ ಹಂತಕ್ಕೆ ಬಂದಿದ್ದು, ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
3 ಪಂದ್ಯಗಳ ಸರಣಿಯಲ್ಲಿ ಭಾರತ ಈಗಾಗಲೇ 2 ಪಂದ್ಯಗಳನ್ನು ಗೆದ್ದಿರುವ ಭಾರತ 2-0 ಮುನ್ನಡೆ ಸಾಧಿಸಿದ್ದು ಮೂರನೇ ಪಂದ್ಯವನ್ನೂ ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಮಾಡುವ ವಿಶ್ವಾಸದಲ್ಲಿದೆ. ಆದರೆ ಕೊನೆಯ ಪಂದ್ಯವನ್ನು ಗೆದ್ದು ಮಾನ ಉಳಿಸಿಕೊಳ್ಳುವ ತವಕದಲ್ಲಿ ಇಂಗ್ಲೆಂಡ್ ಪಡೆಯಿದೆ. ಹೀಗಾಗಿ ಇಂದಿನ ಪಂದ್ಯ ಕುತೂಹಲ ಮೂಡಿಸಿದೆ.
ಇಂದಿನ ಪಂದ್ಯಕ್ಕಾಗಿ ಭಾರತ 4 ಬದಲಾವಣೆ ಮಾಡಿದ್ದು, ರವಿ ಬಿಷ್ಣೈ, ಉಮ್ರಾನ್ ಮಲಿಕ್, ಅವೇಶ್ ಖಾನ್ ಮತ್ತು ಶ್ರೇಯಸ್ ಅಯ್ಯರ್ ಮರಳಿದ್ದಾರೆ. ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ ಮತ್ತು ಯುಜ್ವೇಂದ್ರ ಚಹಾಲ್ ಅವರಿಗೆ ವಿಶ್ರಾಂತಿ ನೀಡಲಾಗಿದೆ.
ತಂಡಗಳು ಇಂತಿವೆ
ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ರಿಷಬ್ ಪಂತ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಹರ್ಷಲ್ ಪಟೇಲ್, ಅವೇಶ್ ಖಾನ್, ಉಮ್ರಾನ್ ಮಲಿಕ್ ಮತ್ತು ರವಿ ಬಿಷ್ಣೋಯ್
ಇಂಗ್ಲೆಂಡ್ ತಂಡ
ಜೋಸ್ ಬಟ್ಲರ್, ಜೇಸನ್ ರಾಯ್, ಡೇವಿಡ್ ಮಲನ್, ಫಿಲ್ ಸಾಲ್ಟ್, ಲಿಯಾಮ್ ಲಿವಿಂಗ್ಸ್ಟನ್, ಮೊಯಿನ್ ಅಲಿ, ಹ್ಯಾರಿ ಬ್ರೂಕ್, ಕ್ರಿಸ್ ಜೋರ್ಡಾನ್, ಡೇವಿಡ್ ವಿಲ್ಲಿ, ರೀಸ್ ಟೋಪ್ಲಿ, ಟಿಮಲ್ ಮಿಲ್ಸ್