ನವದೆಹಲಿ: ಮಗುವನ್ನು ದತ್ತು ತೆಗೆದುಕೊಳ್ಳಲು ಕಳೆದ ಮೂರು ವರ್ಷಗಳಿಂದ ಕಾಯುತ್ತಿರುವ ದಂಪತಿ ಸಂಖ್ಯೆ 16 ಸಾವಿರಕ್ಕೂ ಅಧಿಕ ಎಂದು ಕೇಂದ್ರೀಯ ದತ್ತು ಸಂಪನ್ಮೂಲ ಪ್ರಾಧಿಕಾರ (ಸಿಎಆರ್‌ಎ) ಹೇಳಿದೆ.
ನವದೆಹಲಿ: ಮಗುವನ್ನು ದತ್ತು ತೆಗೆದುಕೊಳ್ಳಲು ಕಳೆದ ಮೂರು ವರ್ಷಗಳಿಂದ ಕಾಯುತ್ತಿರುವ ದಂಪತಿ ಸಂಖ್ಯೆ 16 ಸಾವಿರಕ್ಕೂ ಅಧಿಕ ಎಂದು ಕೇಂದ್ರೀಯ ದತ್ತು ಸಂಪನ್ಮೂಲ ಪ್ರಾಧಿಕಾರ (ಸಿಎಆರ್‌ಎ) ಹೇಳಿದೆ.
ಕಾನೂನಾತ್ಮಕವಾಗಿ ದತ್ತು ತೆಗೆದುಕೊಳ್ಳಲು ಅರ್ಹ ಮಕ್ಕಳ ಸಂಖ್ಯೆ ಕಡಿಮೆ ಇರುವುದೇ ಕಾಯುವಿಕೆ ದೀರ್ಘವಾಗಲು ಕಾರಣ ಎಂದು ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದಾರೆ.
ಸುದ್ದಿಸಂಸ್ಥೆ ಪಿಟಿಐ ಸಲ್ಲಿಸಿದ್ದ ಆರ್‌ಟಿಐ ಅರ್ಜಿಗೆ ನೀಡಿರುವ ಉತ್ತರದಲ್ಲಿ ಸಿಎಆರ್‌ಎ ಈ ಮಾಹಿತಿ ನೀಡಿದೆ.
ಮಗುವನ್ನು ದತ್ತು ತಗೆದುಕೊಳ್ಳಲು 28,501 ದಂಪತಿ ಅರ್ಜಿ ಸಲ್ಲಿಸಿದ್ದು, ದತ್ತು ಸ್ವೀಕಾರಕ್ಕೆ ಅವರಿಗೆ ಅನುಮೋದನೆಯನ್ನು ಸಹ ನೀಡಲಾಗಿದೆ. ಈ ಪೈಕಿ, 16,155 ದಂಪತಿ ಕಳೆದ ಮೂರು ವರ್ಷಗಳಿಂದ ಮಗುವನ್ನು ದತ್ತು ಪಡೆಯುವ ತಮ್ಮ ಸರದಿಗಾಗಿ ಕಾಯುತ್ತಿದ್ದಾರೆ ಎಂದು ಪ್ರಾಧಿಕಾರ ಮಾಹಿತಿ ನೀಡಿದೆ.
ಈ ಮೊದಲು ಮಗುವೊಂದನ್ನು ದತ್ತು ಪಡೆಯುವ ಪ್ರಕ್ರಿಯೆ ನ್ಯಾಯಾಲಯಗಳ ವ್ಯಾಪ್ತಿಗೆ ಒಳಪಟ್ಟಿತ್ತು. ಕಳೆದ ವರ್ಷ ಕೇಂದ್ರ ಸರ್ಕಾರ ಬಾಲ ನ್ಯಾಯ ಕಾಯ್ದೆಗೆ ತಿದ್ದುಪಡಿ ತಂದಿದ್ದು, ಮಗುವನ್ನು ದತ್ತು ಪಡೆಯುವುದಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ.