HEALTH TIPS

ಮಹಾರಾಷ್ಟ್ರ: ಜುಲೈ 4 ಕ್ಕೆ ಏಕನಾಥ್ ಶಿಂಧೆ ಸರ್ಕಾರ ವಿಶ್ವಾಸಮತ ಯಾಚನೆ

           ಮುಂಬೈ: ಮಹಾರಾಷ್ಟ್ರದಲ್ಲಿನ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ-ಭಾರತೀಯ ಜನತಾ ಪಾರ್ಟಿ ನೂತನ ಸರ್ಕಾರ ಜುಲೈ 4 ರಂದು ವಿಶ್ವಾಸಮತ ಯಾಚಿಸಲಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. 

             ಬಿಜೆಪಿ ಶಾಸಕ ರಾಹುಲ್ ನರ್ವೇಕರ್ ವಿಧಾನಸಭಾ ಸ್ಪೀಕರ್ ಸ್ಥಾನಕ್ಕಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಒಂದು ವೇಳೆ ಈ ಸ್ಥಾನಕ್ಕೆ ಚುನಾವಣೆ ಅಗತ್ಯವಾದರೆ ಎರಡು ದಿನಗಳ ವಿಶೇಷ ಅಧಿವೇಶನ ಆರಂಭವಾಗುವ ಜುಲೈ 3 ರಂದು ಚುನಾವಣೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

                 ಕಾಂಗ್ರೆಸ್ ಪಕ್ಷದ ನಾನಾ ಪಟೋಲೆ ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಂದಿನಿಂದಲೂ ಆ ಸ್ಥಾನ ತೆರವಾಗಿದೆ. ಜುಲೈ 4 ರಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸದನದಲ್ಲಿ ವಿಶ್ವಾಸಮತ ಯಾಚಿಸಲಿದ್ದಾರೆ ಎಂದು ವಿಧಾನ ಭವನದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries