ನವದೆಹಲಿ: ಜೂನ್ ನಲ್ಲಿ ಸಂಗ್ರಹವಾದ ಜಿಎಸ್ ಟಿ ಆದಾಯ, ಕಳೆದ ವರ್ಷದ ಇದೇ ತಿಂಗಳಿಗೆ ಹೋಲಿಕೆ ಮಾಡಿದರೆ ಶೇ.56 ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಜೂನ್ ತಿಂಗಳಲ್ಲಿ 1.44 ಲಕ್ಷ ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರವಾಗಿದೆ. 2017 ರ ಜು.1 ರಂದು ಜಿಎಸ್ ಟಿಯನ್ನು ಜಾರಿಗೊಳಿಸಲಾಗಿತ್ತು.
ನಿರ್ಮಲಾ ಸೀತಾರಾಮನ್ ಶುಕ್ರವಾರದಂದು ಜಿಎಸ್ ಟಿ ದಿನವನ್ನು ಉದ್ಘಾಟಿಸಿದ್ದು, ಈಗ 1.4 ಲಕ್ಷ ಕೋಟಿ ಜಿಎಸ್ ಟಿ ಸಂಗ್ರಹಕ್ಕೆ ಕನಿಷ್ಠ ಮಾನದಂಡವಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಮೇ ತಿಂಗಳಲ್ಲಿ ಜಿಎಸ್ ಟಿ ಸಂಗ್ರಹ 1.41 ಲಕ್ಷ ಕೋಟಿ ರೂಪಾಯಿಗಳಷ್ಟಾಗಿತ್ತು.