ಕಾಸರಗೋಡು: ಕಾಂಞಂಗಾಡ್ ಪ್ಲಾಸ್ಟಿಕ್ ಮುಕ್ತ ನಗರಸಭೆಯಾಗುವ ಗುರಿ ಹೊಂದಿದೆ. ಪ್ಲಾಸ್ಟಿಕ್ ಮುಕ್ತ ನಗರವಾಗುವ ಕನಸಿಗೆ ಮೊದಲ ಹೆಜ್ಜೆಯಾಗಿ ಕಾಞಂಗಾಡು ಹಲವು ಚಟುವಟಿಕೆಗಳನ್ನು ಕೈಗೊಳ್ಳುತ್ತಿದೆ.
ನಗರಸಭೆಯು ಜುಲೈ 1 ರಿಂದ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳ ಮೇಲೆ ನಿಷೇಧ ಹೇರಿತ್ತು. ಇದರ ಅಂಗವಾಗಿ ನಗರಸಭೆ ಅಧ್ಯಕ್ಷೆ ಕೆ.ವಿ.ಸುಜಾತಾ ಅಧ್ಯಕ್ಷತೆಯಲ್ಲಿ ನಗರದ ವರ್ತಕರ ಸಭೆ ಕರೆಯಲಾಗಿತ್ತು. ಪ್ಲಾಸ್ಟಿಕ್ ಮುಕ್ತ ನಗರದ ಗುರಿಯತ್ತ ವ್ಯಾಪಾರಸ್ಥರಲ್ಲಿ ಜಾಗೃತಿ ಮೂಡಿಸಿ, ಪ್ಲಾಸ್ಟಿಕ್ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು. ಮುಂದಿನ ದಿನಗಳಲ್ಲಿ ವ್ಯಾಪಾರ ಸಂಸ್ಥೆಗಳನ್ನು ಪರಿಶೀಲಿಸಲಾಗುವುದು. ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಷ್ಟ್ರಮಟ್ಟದಲ್ಲಿ ಕೇಂದ್ರ ಸರ್ಕಾರ ಜುಲೈನಿಂದ ಏಕ-ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳ ನಿಷೇಧವನ್ನು ಜಾರಿಗೆ ತಂದಿದ್ದರೆ, ರಾಜ್ಯದಲ್ಲೂ ನಿಷೇಧ ಜಾರಿಗೊಳಿಸಲಾಗಿದೆ. ಎರಡೂವರೆ ವರ್ಷಗಳ ಹಿಂದೆ ಕೇರಳ ಒಂದೇ ಬಾರಿ ಬಳಸುವ ಪ್ಲಾಸ್ಟಿಕ್ ಸೇರಿದಂತೆ 15 ವರ್ಗದ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ನಿಷೇಧಿಸಿತ್ತು.