ಉದಯಪುರ: ರಾಜಸ್ಥಾನದ ಉದಯಪುರದಲ್ಲಿ ನಡೆದ ಟೇಲರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಏಳನೇ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಶನಿವಾರ ಬಂಧಿಸಿದೆ.
ಉದಯಪುರ ಟೇಲರ್ ಹತ್ಯೆ ಪ್ರಕರಣ: ಏಳನೇ ಆರೋಪಿ ಬಂಧನ
0
ಜುಲೈ 10, 2022
Tags
ಉದಯಪುರ: ರಾಜಸ್ಥಾನದ ಉದಯಪುರದಲ್ಲಿ ನಡೆದ ಟೇಲರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಏಳನೇ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಶನಿವಾರ ಬಂಧಿಸಿದೆ.
31 ವರ್ಷ ವಯಸ್ಸಿನ ಫರ್ಹಾದ್ ಮೊಹಮ್ಮದ್ ಶೇಖ್‌ನನ್ನು 7ನೇ ಆರೋಪಿ ಎಂದು ಗುರುತಿಸಲಾಗಿದೆ.
ಪ್ರವಾದಿ ಮಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ವ್ಯಕ್ತಿಯ ಶಿರಚ್ಛೇದ ಮಾಡಿ ಹತ್ಯೆ ಮಾಡಲಾಗಿತ್ತು.
ಕೃತ್ಯದ ವಿಡಿಯೊ ಚಿತ್ರೀಕರಣ ಮಾಡಿಕೊಂಡಿದ್ದ ದುಷ್ಕರ್ಮಿಗಳು ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು.