ವಿಜಯವಾಡ: ಆಂಧ್ರಪ್ರದೇಶದಲ್ಲಿ ಪ್ರಧಾನಿ ಮೋದಿ ಪ್ರವಾಸ ವೇಳೆ ಭದ್ರತಾ ಲೋಪವಾಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ಬಳಿ ಪ್ರತಿಭಟನಾಕಾರರು ಭದ್ರತಾ ಲೋಪದಿಂದ ಕಪ್ಪು ಬಲೂನ್‌ಗಳು ಹಾರಾಡಿವೆ.
ವಿಜಯವಾಡದಲ್ಲಿ ಪ್ರಧಾನಿ ಮೋದಿಯವರ ಹೆಲಿಕಾಪ್ಟರ್ ಟೇಕಾಫ್ ಆಗುತ್ತಿರುವಾಗ ಕಪ್ಪು ಬಲೂನ್‌ಗಳು ಗಗನದತ್ತ ಮುಖಮಾಡಿ ಹಾರಾಡಿದ್ದವು.
ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ಟೇಕ್ ಆಫ್ ಆದ ವಿಮಾನ ನಿಲ್ದಾಣದಲ್ಲಿ ಕೆಲವು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದರು. ಅವರು ಕಪ್ಪು ಬಲೂನ್‌ಗಳು ಮತ್ತು ಫಲಕಗಳನ್ನು ಹಿಡಿದು ಪ್ರಧಾನಿಯನ್ನು ಗುರಿಯಾಗಿಸಿಕೊಂಡು ಘೋಷಣೆಗಳನ್ನು ಕೂಗುತ್ತಿದ್ದರು ಎಂದು ವರದಿಯಾಗಿದೆ. ಕಾಂಗ್ರೆಸ್ ಪ್ರತಿಭಟನಾಕಾರರು ಕಪ್ಪು ಬಲೂನ್ ಗಳನ್ನು ಹಾರಿಸಿದ್ದಾರೆನ್ನಲಾಗಿದೆ. ಈ ಸಂಬಂಧ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಭೀಮಾವರಂನಲ್ಲಿ ಸೋಮವಾರ ನಡೆದ ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ ರಾಜು ಅವರ 125 ನೇ ಜನ್ಮ ದಿನಾಚರಣೆಯ ವಿಶೇಷ ಕಾರ್ಯಕ್ರಮದಲ್ಲಿ 30 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದರು.