ಲಖನೌ: ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್, ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಎಲ್ಲ ಘಟಕಗಳನ್ನು ಭಾನುವಾರ ವಿಸರ್ಜಿಸಿದ್ದಾರೆ.
ಲಖನೌ: ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್, ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಎಲ್ಲ ಘಟಕಗಳನ್ನು ಭಾನುವಾರ ವಿಸರ್ಜಿಸಿದ್ದಾರೆ.
ಯುವ, ಮಹಿಳಾ ವಿಭಾಗ ಸೇರಿದಂತೆ ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲಾ ಘಟಕಗಳನ್ನು ವಿಸರ್ಜಿಸಿದ್ದಾರೆ.
ಈ ವಿಸರ್ಜನೆಗೆ ಕಾರಣವನ್ನು ತಿಳಿಸಿಲ್ಲ. ಇತ್ತೀಚೆಗೆ ನಡೆದ ರಾಂಪುರ, ಅಜಂಗಢ ಲೋಕಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.
ಹಾಗಿದ್ದರೂ ಉತ್ತರ ಪ್ರದೇಶ ಘಟಕದ ಅಧ್ಯಕ್ಷ ನರೇಶ್ ಉತ್ತಮ್ ಅವರು ತಮ್ಮ ಸ್ಥಾನದಲ್ಲಿ ಮುಂದುವರಿಯುತ್ತಾರೆ ಎಂದು ಪಕ್ಷವು ಹೇಳಿದೆ.
2024ರ ಲೋಕಸಭೆ ಚುನಾವಣೆಗೆ ಪಕ್ಷವು ಸಜ್ಜಾಗುತ್ತಿದ್ದು, ಬಿಜೆಪಿಯನ್ನು ಎದುರಿಸಲು ಸಂಘಟನೆ ಬಲಪಡಿಸುವುದರತ್ತ ಗಮನ ಹರಿಸಿದೆ.