ನವದೆಹಲಿ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಎಚ್ಚರಿಕೆಯ ಹೊರತಾಗಿಯೂ ಕರಪತ್ರಗಳನ್ನು ಪ್ರದರ್ಶಿಸಿದ, ಕಲಾಪಕ್ಕೆ ಅಡ್ಡಿಪಡಿಸಿದ ನಾಲ್ವರು ಕಾಂಗ್ರೆಸ್ ಸಂಸದರನ್ನು ಮುಂಗಾರು ಅಧಿವೇಶನದ ಉಳಿದ ಅವಧಿಗೆ ಅಮಾನತು ಮಾಡಲಾಗಿದೆ.
ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸಿದ ಬಳಿಕ ಕಾಂಗ್ರೆಸ್ ಸಂಸದರಾದ ಮಾಣಿಕ್ಕಂ ಟಾಗೋರ್, ಟಿ.ಎನ್.
ಪ್ರತಾಪನ್, ಜ್ಯೋತಿಮಣಿ ಹಾಗೂ ರಮ್ಯಾ ಹರಿದಾಸ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಬಳಿಕ, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ನಾಲ್ವರು ಸಂಸದರನ್ನು ಅಧಿವೇಶನದ ಉಳಿದ ಅವಧಿಗೆ ಅಮಾನತು ಮಾಡುವುದಕ್ಕೆ ಸಂಬಂಧಿಸಿ ನಿಲುವಳಿ ಮಂಡಿಸಿದರು. ಧ್ವನಿಮತದ ಮೂಲಕ ನಿಲುವಳಿಗೆ ಅಂಗೀಕಾರ ಪಡೆಯಲಾಯಿತು. ಬಳಿಕ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.
ಅಮಾನತುಗೊಂಡ ಸಂಸದರು ಬೆಲೆ ಏರಿಕೆ ವಿಚಾರವಾಗಿ ಕರಪತ್ರಗಳನ್ನು ಪ್ರದರ್ಶಿಸಿದ್ದಲ್ಲದೆ, ನಿರಂತರವಾಗಿ ಕಲಾಪಕ್ಕೆ ಅಡ್ಡಿಪಡಿಸಿದ್ದರು ಎನ್ನಲಾಗಿದೆ.