ಕಾಸರಗೋಡು: ವಿಶ್ವ ಜನಸಂಖ್ಯಾ ದಿನದ ಅಂಗವಾಗಿ ಜಿಲ್ಲಾ ವೈದ್ಯಕೀಯ ಕಚೇರಿ (ಆರೋಗ್ಯ), ರಾಷ್ಟ್ರೀಯ ಆರೋಗ್ಯ ಮಿಷನ್, ನೆಹರು ಯುವ ಕೇಂದ್ರ ಹಾಗೂ ರೋಟರಿ ಕ್ಲಬ್ ನೇತೃತ್ವದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಹಮ್ಮಿಕೊಳ್ಳಲಾಯಿತು. ರಾಷ್ಟ್ರೀಯ ಆರೋಗ್ಯ ಮಿಷನ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಉದ್ಘಾಟನೆಯನ್ನು ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಮುರಳೀಧರ ನಲ್ಲೂರಾಯ ನೆರವೇರಿಸಿದರು.
ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಪಿ. ಅಖಿಲ್ ಅಧ್ಯಕ್ಷತೆ ವಹಿಸಿದ್ದರು. ಕಾಞಂಗಾಡು ಐಎಂಎ ಅಧ್ಯಕ್ಷ ಡಾ. ಟಿ.ವಿ.ಪದ್ಮನಾಭನ್ ಪ್ರಧಾನ ಭಾಷಣ ಮಾಡಿದರು. ಕಾಞಂಗಾಡು ರೋಟರಿ ಕ್ಲಬ್ ಅಧ್ಯಕ್ಷ ಕೆ.ಕೆ.ಸೇವಿಚನ್ ಮತ್ತು ಜಿಲ್ಲಾ ಎಂಸಿಎಚ್ ಪ್ರಭಾರ ಅಧಿಕಾರಿ ಎನ್.ಜಿ.ತಂಗಮಣಿ ಉಪಸ್ಥಿತರಿದ್ದರು. ಜಿಲ್ಲಾ ಶಿಕ್ಷಣ ಮತ್ತು ಮಾಧ್ಯಮ ಅಧಿಕಾರಿ ಅಬ್ದುಲ್ ಲತೀಫ್ ಮಠತ್ತಿಲ್ ಸ್ವಾಗತಿಸಿದರು. ಜಿಲ್ಲಾ ಉಪ ಶಿಕ್ಷಣ ಮತ್ತು ಮಾಧ್ಯಮ ಅಧಿಕಾರಿ ಎಸ್.ಸಯನಾ ವಂದಿಸಿದರು. ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜನಸಂಖ್ಯಾ ಜಾಗೃತಿ ಆಂದೋಲನ ಮತ್ತು ಜುಲೈ 24 ರವರೆಗೆ ಜನಸಂಖ್ಯೆ ಸ್ಥಿರೀಕರಣ ಅಭಿಯಾನದ ಅಂಗವಾಗಿ ಜಿಲ್ಲೆಯ ವಿವಿಧ ಆರೋಗ್ಯ ಕೇಂದ್ರಗಳಲ್ಲಿ ಕುಟುಂಬ ಯೋಜನಾ ವಿಧಾನಗಳ ಕುರಿತು ಜಾಗೃತಿ ಕಾರ್ಯಕ್ರಮ ಜರುಗಲಿರುವುದು.