ಮಂಜೇಶ್ವರ: ಮುಡೂರು ತೋಕೆಯ ಶ್ರೀ ಸುಬ್ರಹ್ಮಣ್ಯ ಎ ಎಲ್ ಪಿ ಶಾಲೆಯಲ್ಲಿ 2022-23ನೇ ಶೈಕ್ಷಣಿಕ ವರ್ಷದ ನೂತನ ರಕ್ಷಕ ಶಿಕ್ಷಕ ಸಂಘದ ಸಭೆ ರಚಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರ್ ಸಿದ್ದಿಕ್ ವಹಿಸಿದರು. ಕಾರ್ಯಕ್ರಮವನ್ನು ಕೆದುಂಬಾಡಿ ವಾರ್ಡ್ ಸದಸ್ಯ ಶಿವರಾಜ್ ಉದ್ಘಾಟಿಸಿದರು. ಶಾಲಾ ವ್ಯವಸ್ಥಾಪಕ ದೇವಪ್ಪ ಶೆಟ್ಟಿ ಶುಭ ಹಾರೈಸಿದರು. ಬಳಿಕ ನೂತನ ರಕ್ಷಕ ಶಿಕ್ಷಕ ಸಂಘದ ಸಮಿತಿಯ ರೂಪೀಕರಿಸಲಾಯಿತು. . ಅಧ್ಯಕ್ಷರಾಗಿ ಅಬೂಬಕ್ಕರ್ ಸಿದ್ದಿಕ್ ಪುನರಾಯ್ಕೆಯಾದರು. ಉಪಾಧ್ಯಕ್ಷರಾಗಿ ಶಿವರಾಜ್ ಕೆದುಂಬಾಡಿ ಆಯ್ಕೆಯಾದರು. ಮಾತೃ ಸಂಘದ ಅಧ್ಯಕ್ಷರಾಗಿ ತೇಜಾಕ್ಷಿ ಹಾಗೂ ಉಪಾಧ್ಯಕ್ಷೆ ಯಾಗಿ ಸುಬೈದ ಅವರು ಆಯ್ಕೆಯಾದರು. ಮುಖ್ಯೋಪಾಧ್ಯಾಯ ಶೈಲೇಶ್ ಸ್ವಾಗತಿಸಿ, ಶಿಕ್ಷಕಿ ಜಯಲಕ್ಷ್ಮಿ ವಂದಿಸಿದರು. ಶಿಕ್ಷಕಿ ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು.