ನವದೆಹಲಿ: ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಯ ಜತೆಗೆ ಸಂಯೋಜಿಸುವುದನ್ನು ಪ್ರಶ್ನಿಸಿದ್ದ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ ಅವರಿಗೆ ದೆಹಲಿ ಹೈಕೋರ್ಟ್‌ಗೆ ಹೋಗಲು ಸುಪ್ರೀಂ ಕೋರ್ಟ್ ಸೂಚಿಸಿದೆ.
ಈ ಹಿಂದೆ ಆಧಾರ್ ಸಂಖ್ಯೆಯನ್ನುಮತದಾರರ ಗುರುತಿನ ಚೀಟಿ ಸಂಯೋಜಿಸುವುದಕ್ಕೆ ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ 2021ಕ್ಕೆ ಸಂಸತ್ತು ಅನುಮೋದನೆ ನೀಡಿತ್ತು.
ಇದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಸುರ್ಜೇವಾಲ, ಕೋರ್ಟ್ ಮೆಟ್ಟಿಲೇರಿದ್ದರು. ಈಗ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹಾಗೂ ಎ.ಎಸ್. ಬೋಪಣ್ಣ ಅವರಿದ್ದ ಪೀಠವು ದೆಹಲಿ ಹೈಕೋರ್ಟ್ ಹೋಗುವಂತೆ ನಿರ್ದೇಶಿಸಿದೆ.