ಚಂಡೀಗಡ: ರಾಜ್ಯ ಸರ್ಕಾರದ ಅಡ್ವೊಕೇಟ್ ಜನರಲ್ ಆಗಿದ್ದ ಹಿರಿಯ ವಕೀಲ ಡಾ. ಅನ್ಮೋಲ್ ರತ್ತನ್ ಸಿಧು ಅವರು ರಾಜೀನಾಮೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ರತ್ತನ್ ಸಿಧು, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ರತ್ತನ್, 'ವೈಯಕ್ತಿಕ ಕಾರಣಗಳಿಂದಾಗಿ ಪಂಜಾಬ್‌ನ ಅಡ್ವೊಕೇಟ್ ಜನರಲ್ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ' ಎಂದು ತಿಳಿಸಿದ್ದಾರೆ.
ಜುಲೈ 19ರಂದು ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಸಿಧು ಹೇಳಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಧನ್ಯವಾದ ಅರ್ಪಿಸಿರುವ ರತ್ತನ್ ಸಿಧು ಅವರು ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. 'ಅತ್ಯಂತ ನಮ್ರತೆಯಿಂದ ಪಂಜಾಬ್ ರಾಜ್ಯದ ಅಡ್ವೊಕೇಟ್ ಜನರಲ್ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ' ಎಂದು ಬರೆದುಕೊಂಡಿದ್ದಾರೆ.