ನವದೆಹಲಿ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿದ್ದ ಶಿವಸೇನೆಯ ಶಾಸಕರನ್ನು ಅನರ್ಹಗೊಳಿಸುವ ಪ್ರಕ್ರಿಯೆಗೆ ಸೋಮವಾರ ಸುಪ್ರೀಂಕೋರ್ಟ್ ತಡೆ ನೀಡಿದೆ.
ನವದೆಹಲಿ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿದ್ದ ಶಿವಸೇನೆಯ ಶಾಸಕರನ್ನು ಅನರ್ಹಗೊಳಿಸುವ ಪ್ರಕ್ರಿಯೆಗೆ ಸೋಮವಾರ ಸುಪ್ರೀಂಕೋರ್ಟ್ ತಡೆ ನೀಡಿದೆ.
ಮುಖ್ಯ ನ್ಯಾಯಮೂರ್ತಿಗಳಾದ ಎನ್. ವಿ ರಮಣ್, ನ್ಯಾ. ಕೃಷ್ಣ ಮುರಾರಿ, ಮತ್ತು ನ್ಯಾ.ಹಿಮಾ ಕೊಹ್ಲಿ ಅವರಿದ್ದ ತ್ರಿ ಸದಸ್ಯ ಪೀಠ ಪ್ರಕರಣದ ವಿಚಾರಣೆಯನ್ನು ಮತ್ತೆ ಮುಂದೂಡಿದೆ.
ಉದ್ಧವ್ ಠಾಕ್ರೆ ಬಣದ ಪರ ವಾದ ಮಂಡಿಸಿದ ಕಪಿಲ್ ಸಿಬಲ್, ಏಕನಾಥ್ ಶಿಂಧೆ ಅವರ 39 ಶಾಸಕರ ಅನರ್ಹತೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ಜುಲೈ 27ರಂದು ನಡೆಯಲಿದೆ ಎಂದು ತಿಳಿಸಿದ್ದಾರೆ. ರಾಜ್ಯಪಾಲರ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಈ ಕುರಿತು ಸ್ಪೀಕರ್‌ಗೆ ತಿಳಿಸುವುದಾಗಿ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದರು.