ಕಾಸರಗೋಡು: ಕೇರಳ ರಾಜ್ಯ ಖಾಸಗಿ ಬಸ್ ಆಪರೇಟರ್ಸ್ ಫೆಡರೇಶನ್ ಕಾಸರಗೋಡು ತಾಲೂಕು ಸಮ್ಮೇಳನ ಜುಲೈ 2 ರಂದು ಮಧ್ಯಾಹ್ನ 2ಗಂಟೆಗೆ ಅಣಂಗೂರಿನ ಸಂಘಟನೆ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಫೆಡರೇಶನ್ ರಾಜ್ಯ ಉಪಾಧ್ಯಕ್ಷ ಎಂ.ಎಸ್. ಪ್ರೇಮಕುಮಾರ್ ಸಮ್ಮೇಳನ ಉದ್ಘಾಟಿಸುವರು. ರಾಜ್ಯ ಜಂಟಿ ಕಾರ್ಯದರ್ಶಿಗಳಾದ ತುಳಸಿದಾಸ್, ರಾಜಕುಮಾರ್ ಸೇರಿದಂತೆ ಜಿಲ್ಲೆಯ ಮುಖಂಡರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.