ಲಖನೌ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಉತ್ತರ ಪ್ರದೇಶದ ಬಿಜೆಪಿ ಪ್ರತಿಸ್ಪರ್ಧಿ ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಚಿಕ್ಕಪ್ಪ ಶಿವಪಾಲ್ ಯಾದವ್ ಘೋಷಿಸಿದ್ದಾರೆ.
ಲಖನೌ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಉತ್ತರ ಪ್ರದೇಶದ ಬಿಜೆಪಿ ಪ್ರತಿಸ್ಪರ್ಧಿ ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಚಿಕ್ಕಪ್ಪ ಶಿವಪಾಲ್ ಯಾದವ್ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದ್ರೌಪದಿ ಮುರ್ಮು ಅವರಿಗೆ ಮತ ಚಲಾಯಿಸುವಂತೆ ಕೋರಿದ್ದಾರೆ. ಅವರನ್ನೇ ಬೆಂಬಲಿಸುವ ತೀರ್ಮಾನ ಕೈಗೊಂಡಿದ್ದೇನೆ ಎಂದು ಶಿವಪಾಲ್ ತಿಳಿಸಿದ್ದಾರೆ.
ಪ್ರಗತಿಶೀಲ ಸಮಾಜವಾದಿ ಪಕ್ಷ (ಲೋಹಿಯಾ)ವನ್ನು ಕಟ್ಟಿಕೊಂಡಿರುವ ಎಸ್‌ಪಿ ಶಾಸಕ ಶಿವಪಾಲ್ ಯಾದವ್ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅಖಿಲೇಶ್ ಜೊತೆ ಮೈತ್ರಿ ಮಾಡಿಕೊಂಡಿದ್ದರು. ಫಲಿತಾಂಶದ ಬಳಿಕ ಇಬ್ಬರ ನಡುವೆ ಒಡಕು ಮೂಡಿದೆ.
ಮುರ್ಮು ಅವರ ಗೌರವಾರ್ಥ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ಏರ್ಪಡಿಸಿದ್ದ ಔತಣ ಕೂಟದಲ್ಲಿ ಎಸ್‌ಪಿ ಮೈತ್ರಿ ಪಕ್ಷ ಸುಹೇಲ್‌ದೇವ್ ಭಾರತೀಯ ಸಮಾಜ್ ಪಾರ್ಟಿ ಮುಖ್ಯಸ್ಥ ಓಂ ಪ್ರಕಾಶ್ ರಾಜ್‌ಭಾರ್ ಮತ್ತು ಶಿವಪಾಲ್ ಯಾದವ್ ಅವರು ಪಾಲ್ಗೊಂಡಿದ್ದರು. ಇದರಿಂದಾಗಿ ಯಶವಂತ ಸಿನ್ಹಾ ಅವರನ್ನು ಬೆಂಬಲಿಸುತ್ತಿರುವ ವಿರೋಧಪಕ್ಷಗಳ ಪಾಳಯದಲ್ಲಿ ಬಿರುಕು ಮೂಡಿದಂತಾಗಿದೆ.