ಮಂಜೇಶ್ವರ: ಕುಂಜತ್ತೂರು ಸರ್ಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ತೆರವಾಗಿರುವ ಅಧ್ಯಾಪಕ ಹುದ್ದೆಗಾಗಿ ದಿನವೇತನ ಆಧಾರದಲ್ಲಿ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನಿಯರ್ ಲಾಂಗ್ವೇಜ್ ಹಿಂದಿ (ಫುಲ್ ಟೈಂ)ಹುದ್ದೆಗೆ ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಮೂಲ ದಾಖಲೆಗಳೊಂದಿಗೆ ದಿನಾಂಕ ಜುಲೈ 4ರಂದು ಬೆಳಗ್ಗೆ 10ಕ್ಕೆ ಶಾಲಾ ಕಛೇರಿಯಲ್ಲಿ ನಡೆಯಲಿರುವ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ (04998) 278985)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.