ಕಾಸರಗೋಡು: ವಿವಿಧ ಬೇಡಿಕೆ ಮುಂದಿರಿಸಿ ರೈತ ಸಂಘ ಕಾಸರಗೋಡು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಅರಣ್ಯ ಇಲಾಖೆ ಕಚೇರಿ ಎದುರು ಮಂಗಳವಾರ ಪ್ರತಿಭಟನಾ ಧರಣಿ ನಡೆಯಿತು. ವನ್ಯಪ್ರಾಣಿ ಸಂರಕ್ಷಣಾ ಕಾಯ್ದೆಗೆ ಸೂಕ್ತ ತಿದ್ದುಪಡಿ ತರುವ ಮೂಲಕ ಕಾಡುಪ್ರಾಣಿಗಳ ಉಪಟಳ ತಡೆಗಟ್ಟಬೇಕು, ಬೆಳೆ ನಾಶವಾದ ರೈತರಿಗೆ ಪರಿಹಾರ ನೀಡಬೇಕು ಮುಂತಾದ ಬೇಡಿಕೆ ಮುಂದಿರಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಪಿ. ಜನಾರ್ದನನ್ ಧರಣಿ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಕೆ. ಕುಞÂರಾಮನ್ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಪಿ. ರಘುದೇವನ್ ಮಾಸ್ಟರ್, ಕುನ್ನುಚ್ಚಿ ಕುಞÂರಾಮನ್, ಎ. ವಿಜಯ ಕುಮಾರ್, ಕೆ. ಅಂಬು ಮಾಸ್ಟರ್, ಟಿ. ಕೋರನ್ ಉಪಸ್ಥಿತರಿದ್ದರು. ಜಿಲ್ಲಾ ಸಮಿತಿ ಸದಸ್ಯ ಎ. ರವೀಂದ್ರನ್ ಸ್ವಾಗತಿಸಿದರು.
ಕಾಡುಪ್ರಾಣಿಗಳಿಂದ ಕೃಷಿ ಸಂರಕ್ಷಿಸುವಂತೆ ಒತ್ತಾಯಿಸಿ ರೈತ ಸಂಘದಿಂದ ಧರಣಿ
0
ಜುಲೈ 27, 2022