ಕಾಸರಗೋಡು: ಜಿಲ್ಲಾಧಿಕಾರಿ ಕಚೇರಿಯ ಎಂಡೋಸಲ್ಫಾನ್ ಕೋಶದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗೆ ಬ್ಯಾಂಕ್ ಖಾತೆಗಳ ಮೂಲಕ ಆರ್ಥಿಕ ನೆರವು ವಿತರಿಸುವ ಪ್ರಕ್ರಿಯೆ ಜಾರಿಯಲ್ಲಿದ್ದು, ಎಂಡೋಸಲ್ಫಾನ್ ಸಂತ್ರಸ್ತರ ಆರ್ಥಿಕ ನೆರವಿನ ಅರ್ಜಿಗಳ ಕುರಿತು ಕ್ರಮ ಕೈಗೊಳ್ಳಲು ಜುಲೈ 3ರ ಭಾನುವಾರವೂ ಜಿಲ್ಲಾಧಿಕಾರಿ ಕಚೇರಿ ತೆರೆದು ಕಾರ್ಯಾಚರಿಸಲಿದೆ. ಎಂಡೋಸಲ್ಫಾನ್ ಪೀಡಿತ ಪ್ರದೇಶದ ಗ್ರಾಮ ಕಚೇರಿಗಳು ಮತ್ತು ಅಕ್ಷಯ ಕೇಂದ್ರಗಳೂ ತೆರೆದು ಕಾರ್ಯಾಚರಿಸಲಿದೆ. ಅಲ್ಲದೆ ಎಲ್ಲಾ ತಾಲೂಕು ಕಚೇರಿಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಜರಿರಲಿದ್ದಾರೆ.
ಎಂಡೋಸಲ್ಫಾನ್ ದುಷ್ಪರಿಣಾಮಪೀಡಿತರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಂಡು, ಓ.ಪಿ ನಂಬರ್ ಲಭಿಸಿದ ಸಂತ್ರಸ್ತರು ಅಗತ್ಯ ದಾಖಲೆಗಳೊಂದಿಗೆ ಅಕ್ಷಯ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಬೇಕು. ಪಟ್ಟಿಯಲ್ಲಿ ಹೆಸರಿದ್ದ ವ್ಯಕ್ತಿಗಳು ಮೃತಪಟ್ಟಿದ್ದರೆ ಅವರ ವಾರಸುದಾರರು ಅಗತ್ಯ ದಾಖಲೆಗಳೊಂದಿಗೆ ಅಕ್ಷಯ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯನ್ನು ಆಯಾ ಗ್ರಾಮ ಕಚೇರಿಗಳಿಂದ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.