ಕಾಸರಗೋಡು: ಕೇರಳದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚಿಸಲು ದೆಹಲಿಯಲ್ಲಿ ಕೇರಳದ ಸಂಸದರ ಸಭೆಯನ್ನು ಆಯೋಜಿಸಲಾಯಿತು. ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ನೇತೃತ್ವದಲ್ಲಿ ಸಭೆ ನಡೆಯಿತು. ಜಿಲ್ಲೆಯಲ್ಲಿ ಷಟ್ಪಥ ಕಾಮಗಾರಿ ಪ್ರಗತಿಯಲ್ಲಿದ್ದು, ಈ ಸಂದರ್ಭ ವಿವಿಧ ಪ್ರದೇಶಗಳಲ್ಲಿನ ಜನರ ಸಮಸ್ಯೆ, ಅಗತ್ಯಗಳನ್ನು ಲಿಖಿತವಾಗಿ ಸಚಿವರಿಗೆ ತಿಳಿಸಲಾಗಿದೆ ಎಂದು ಕಾಸರಗೋಡು ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್ ತಿಳಿಸಿದ್ದಾರೆ.
ಶಾಸಕರು, ನಗರಸಭೆ ಅಧ್ಯಕ್ಷರು ಹಾಗೂ ಇತರ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಇದುವರೆಗೆ ನೀಡಿರುವ ಸಲಹೆ, ಸೂಚನೆಗಳನ್ನು ಕ್ರೋಡೀಕರಿಸಿ ಇವರ ಬೇಡಿಕೆಗಳನ್ನು ಸಚಿವರಿಗೆ ತಿಳಿಸಲಾಗಿದೆ. ಯೋಜನೆ ಅನುಷ್ಠಾನಗೊಳಿಸುವಾಗ ಜನರ ನೈಜ ಅಗತ್ಯಗಳಿಗೆ ಆದ್ಯತೆ ನೀಡಿ ತಾಂತ್ರಿಕ ಮತ್ತು ಆರ್ಥಿಕ ಸಾಧ್ಯತೆಗಳನ್ನು ಪರಿಗಣಿಸಿ ಬೇಡಿಕೆ ಈಡೇರಿಸುವ ಬಗ್ಗೆ ಕೇಂದ್ರ ಸಚಿವರು ಭರವಸೆ ನೀಡಿರುವುದಾಗಿ ತಿಳಿಸಿದ್ದಾರೆ.
ರಸ್ತೆ ಷಟ್ಪಥ ಯೋಜನೆ: ಕೇಂದ್ರ ಸಚಿವರಿಂದ ಕೇರಳ ಸಂಸದರ ಭೇಟಿ
0
ಜುಲೈ 29, 2022