HEALTH TIPS

ಅಕ್ಕಿಗೆ ಜಿ.ಎಸ್.ಟಿ.ಗೆ ಬೇಕೆಂದು ಬೇಡಿಕೆ ಇರಿಸಿದ್ದು ಕೇರಳ: ಕ್ರಮ ಪುನಃ ಪರಿಶೀಲಿಸುವಂತೆ ಪ್ರಧಾನಿಗೆ ಮುಖ್ಯಮಂತ್ರಿ ಪತ್ರ

                   ತಿರುವನಂತಪುರ: ಅಕ್ಕಿ ಸೇರಿದಂತೆ ದಿನಬಳಕೆಯ ವಸ್ತುಗಳ ಮೇಲೆ ಜಿ ಎಸ್ ಟಿ ಜಾರಿ ಮಾಡಿರುವ ಕುರಿತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯಮಂತ್ರಿ ಪತ್ರದಲ್ಲಿ ಮನವಿ ಮಾಡಿದ್ದಾರೆ. ಅಕ್ಕಿಗೆ ಜಿ ಎಸ್ ಟಿಗೆ ಆಗ್ರಹಿಸಿ ಕೇಂದ್ರದ ಮೊರೆ ಹೋಗಿರುವ ರಾಜ್ಯಗಳಲ್ಲಿ ಕೇರಳವೂ ಸೇರಿದೆ. ಆದರೆ ಟೀಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳವು ಕೇಂದ್ರದ ಮೇಲೆ ಆರೋಪ ಹೊರಿಸಲು ಯತ್ನಿಸುತ್ತಿದೆ.

                   ಅಕ್ಕಿ, ಗೋಧಿ ಸೇರಿದಂತೆ ದೈನಂದಿನ ಬಳಕೆಯ ವಸ್ತುಗಳ ಮೇಲಿನ ಜಿಎಸ್‍ಟಿಯನ್ನು ತುರ್ತಾಗಿ ಪರಿಶೀಲಿಸುವಂತೆ ಮುಖ್ಯಮಂತ್ರಿ ಪತ್ರದಲ್ಲಿ ಪ್ರಧಾನಿಗೆ ಮನವಿ ಮಾಡಿದ್ದಾರೆ. ಈ ನಿರ್ಧಾರದಿಂದ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಾಗಲಿದ್ದು, ಜನಜೀವನದ ಮೇಲೆ ಪರಿಣಾಮ ಬೀರಲಿದೆ. ಜಿಎಸ್‍ಟಿ ನಿಯಮಗಳ ಬದಲಾವಣೆಯಿಂದಾಗಿ ಕಿರಾಣಿ ಅಂಗಡಿಗಳಲ್ಲಿ ಸಣ್ಣ ಪ್ಯಾಕೆಟ್‍ಗಳಲ್ಲಿ ಮಾರಾಟವಾಗುವ ವಸ್ತುಗಳ ಬೆಲೆಗಳು ಹೆಚ್ಚಾಗುತ್ತವೆ. ಇದು ಜನರಲ್ಲಿ ಆತಂಕ ಮೂಡಿಸಿದೆ ಎಂದೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

             ಕೇರಳದ ಸಣ್ಣ ಅಂಗಡಿಗಳಲ್ಲಿಯೂ ಸಹ, ಅಂಗಡಿಯಲ್ಲಿ ಜನಸಂದಣಿಯನ್ನು ಕಡಿಮೆ ಮಾಡಲು ಮತ್ತು ಸರಕುಗಳನ್ನು ಸುಲಭವಾಗಿ ಒದಗಿಸುವ ಸಲುವಾಗಿ ಆಹಾರ ಧಾನ್ಯಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಪ್ಯಾಕೆಟ್‍ಗಳಲ್ಲಿ ಇರಿಸಲಾಗುತ್ತದೆ. ಇದನ್ನೆಲ್ಲ ಜಿಎಸ್ ಟಿ ವ್ಯಾಪ್ತಿಗೆ ತಂದರೆ ಈ ಅಂಗಡಿಗಳನ್ನೇ ಅವಲಂಬಿಸಿರುವ ಜನಸಾಮಾನ್ಯರಿಗೆ ಕಷ್ಟವಾಗುವುದರಲ್ಲಿ ಸಂಶಯವಿಲ್ಲ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೇರಳ ಈಗಾಗಲೇ ಕೇಂದ್ರ ಸರ್ಕಾರಕ್ಕೆ ತಿಳಿಸಿತ್ತು. ದಿನಬಳಕೆ ವಸ್ತುಗಳ ಬೆಲೆ ಹೆಚ್ಚಾಗುವ ಪರಿಸ್ಥಿತಿಯನ್ನು ತಪ್ಪಿಸಬೇಕು ಮತ್ತು ವಿಸ್ತೃತ ಅಧ್ಯಯನದ ನಂತರವೇ ಯಾವುದೇ ಕ್ರಮ ಕೈಗೊಳ್ಳಬೇಕು ಎಂದು ಕೇರಳ ಜಿ.ಎಸ್. ಟಿ ಸಭೆಗಳಲ್ಲಿ ಸ್ಪಷ್ಟಪಡಿಸಲಾಗಿದೆ ಎಂದೂ ಪತ್ರದಲ್ಲಿ ತಿಳಿಸಲಾಗಿದೆ.

                  ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಆರ್ಥಿಕವಾಗಿಯೂ ದೇಶದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ಪ್ರಧಾನಮಂತ್ರಿಗಳು ಆದಷ್ಟು ಬೇಗ ಮಧ್ಯಪ್ರವೇಶಿಸಿ ನಿರ್ಧಾರವನ್ನು ಪರಿಶೀಲಿಸುವಂತೆ ಪತ್ರದಲ್ಲಿ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries