ಕಾಸರಗೋಡು: ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಜಲಾನಯನ ಪ್ರದೇಶಗಳು ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಸೋಮವಾರ, ಜುಲೈ 11) ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಮತ್ತು ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರಚಂದ್ ತಿಳಿಸಿದ್ದಾರೆ. ಕಾಲೇಜುಗಳಿಗೆ ರಜೆ ಅನ್ವಯಿಸುವುದಿಲ್ಲ.