ನವದೆಹಲಿ: ಅಗತ್ಯ ಔಷಧಗಳ ಕೊರತೆ ಉಂಟಾಗಿದೆ ಎಂದು ಹೆಚ್‌ಐವಿ ಸೋಂಕಿತರು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ಆಯಂಟಿರೆಟ್ರೋವೈರಲ್ ಔಷಧಗಳ ಕೊರತೆ ಇದೆ ಎಂದು ಆರೋಪಿಸಿರುವ ಹೆಚ್‌ಐವಿ ಸೋಂಕಿತರು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು.
ನಮಗೆ ಔಷಧಿ ಕೊಡಿ, ನಾವು ಭಿಕ್ಷೆ ಬೇಡುತ್ತಿಲ್ಲ, ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ ಎಂಬ ಫಲಕಗಳನ್ನು ಹಿಡಿದು ಪ್ರತಿಭಟಿಸಿದರು.
ದೆಹಲಿ ಸೇರಿದಂತೆ ಅಕ್ಕಪಕ್ಕದ ರಾಜ್ಯಗಳಲ್ಲಿ ಕಳೆದ 5 ತಿಂಗಳುಗಳಿಂದ ಹೆಚ್‌ಐವಿ ರೋಗಿಗಳಿಗೆ ಅಗತ್ಯವಿರುವ ಔಷಧಗಳು ಲಭ್ಯವಿಲ್ಲ, ಅಧಿಕಾರಿಗಳಿಗೆ ಈ ಬಗ್ಗೆ ಹಲವು ಸಲ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರೊಬ್ಬರು ಹೇಳಿದ್ದಾರೆ.