ಕಾಸರಗೋಡು: ಮುಂಗಾರು ಮಳೆಯಿಂದ ಹಾನಿಗೊಳಗಾದವರಿಗೆ ಸಕಾಲದಲ್ಲಿ ಪರಿಹಾರ ನೀಡಲು ಹೊಸದುರ್ಗ ತಾಲೂಕು ಅಭಿವೃದ್ಧಿ ಸಮಿತಿ ಸಭೆ ಆಗ್ರಹಿಸಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪೆರಿಯ, ನೀಲೇಶ್ವರಂ ಮುಂತಾದ ಕಡೆ ಅಂಡರ್ ಪಾಸ್ ವ್ಯವಸ್ಥೆ ಮಾಡಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.
ಪಳ್ಳಿಕ್ಕರ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ ಕುಮಾರನ್ ಅಧ್ಯಕ್ಷತೆ ವಹಿಸಿದ್ದರು. ವಲಿಯಪರಂಬ ಪಂಚಾಯಿತಿ ಅಧ್ಯಕ್ಷ ವಿ.ವಿ.ಸಜೀವನ್, ಚೆರುವತ್ತೂರು ಪಂಚಾಯಿತಿ ಅಧ್ಯಕ್ಷೆ ಸಿ.ವಿ.ಪ್ರಮೀಳಾ, ಮಡಿಕೈ ಪಂಚಾಯಿತಿ ಅಧ್ಯಕ್ಷೆ ಎಸ್.ಪ್ರೀತಾ, ನೀಲೇಶ್ವರಂ ನಗರಸಭೆ ಅಧ್ಯಕ್ಷೆ ಟಿ.ವಿ.ಶಾಂತಾ, ಪುಲ್ಲೂರು ಪೆರಿಯ ಪಂಚಾಯಿತಿ ಅಧ್ಯಕ್ಷ ಸಿ.ಕೆ.ಅರವಿಂದನ್, ಜನಪ್ರತಿನಿಧಿಗಳು, ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು. ಹೊಸದುರ್ಗ ತಹಸೀಲ್ದಾರ್ ಎನ್.ಮಣಿರಾಜ್ ಸ್ವಾಗತಿಸಿದರು.