ನವದೆಹಲಿ: ರಾಷ್ಟ್ರಪತಿ ಹುದ್ದೆಗೆ ಏರಿದ್ದು ನನ್ನ ವೈಯಕ್ತಿಕ ಸಾಧನೆಯಲ್ಲ. ಭಾರತದ ಎಲ್ಲ ಬಡವರ ಸಾಧನೆಯಾಗಿದೆ. ರಾಷ್ಟ್ರಪತಿ ಹುದ್ದೆಗೆ ನನ್ನ ಹೆಸರನ್ನು ಘೋಷಿಸಿದ್ದು, ದೇಶದಲ್ಲಿ ಬಡವರು ಕನಸನ್ನು ಕಾಣುವುದಷ್ಟೇ ಅಲ್ಲ. ಅದನ್ನು ಸಾಕಾರಗೊಳಿಸಿಕೊಳ್ಳಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.
ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ಬಳಿಕ, ದೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸ್ವತಂತ್ರ ಭಾರತದಲ್ಲಿ ಜನಿಸಿದದರಲ್ಲಿ ರಾಷ್ಟ್ರಪತಿ ಹುದ್ದೆಗೇರಿದ ಮೊದಲಿಗಳು ನಾನು. ಸ್ವತಂತ್ರ ಭಾರತ ಹೇಗಿರಬೇಕೆಂದು ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಇಟ್ಟುಕೊಂಡಿದ್ದ ನಿರೀಕ್ಷೆಗಳನ್ನು ಸಾಕಾರಗೊಳಿಸುವತ್ತ ನಾವು ವೇಗವಾಗಿ ಮುನ್ನಡೆಯಬೇಕು ಎಂದು ಅವರು ಹೇಳಿದ್ದಾರೆ.
ಎಲ್ಲಾ ಭಾರತೀಯರ ನಿರೀಕ್ಷೆಗಳು, ಆಕಾಂಕ್ಷೆಗಳು ಮತ್ತು ಹಕ್ಕುಗಳ ಸಂಕೇತವಾದ ಸಂಸತ್ತಿನಲ್ಲಿ ನಿಂತು ನಾನು ನಿಮ್ಮೆಲ್ಲರಿಗೂ ವಿನಮ್ರವಾಗಿ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಈ ಹೊಸ ಜವಾಬ್ದಾರಿಯನ್ನು ನಿರ್ವಹಿಸಲು ನಿಮ್ಮ ನಂಬಿಕೆ ಮತ್ತು ಬೆಂಬಲ ನನಗೆ ಪ್ರಮುಖ ಶಕ್ತಿಯಾಗಿದೆ ಎಂದು ಅವರು ಹೇಳಿದರು.
.. 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರ
Koo App नए भारत का स्वर्णिम दिन! श्रीमती द्रौपदी मुर्मू जी को भारत के 15वें राष्ट्रपति के रूप में शपथ लेने के लिए मेरी हार्दिक बधाई एवं शुभकामनाएँ। यह क्षण प्रत्येक भारतवासी के लिए गौरव का क्षण है। सबका साथ, सबका विकास, सबका विश्वास और 'सबका प्रयास' का मंत्र आज चरितार्थ हो रहा है।View attached media content
- Dr Mansukh Mandaviya (@mansukhmandviya) 25 July 2022