ಮ್ಯಾಂಚೆಸ್ಟರ್: ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸುವ ಮೂಲಕ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ.
ಮ್ಯಾಂಚೆಸ್ಟರ್ ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ 259 ರನ್ ಗಳಿಗೆ ಆಲೌಟ್ ಆಗಿದ್ದು ಭಾರತಕ್ಕೆ ಗೆಲ್ಲಲ್ಲು 260 ರನ್ ಗಳ ಗುರಿ ನೀಡಿತ್ತು. ಈ ರನ್ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ರಿಷಬ್ ಪಂತ್ ಭರ್ಜರಿ ಶತಕ ಬಾರಿಸುವ ಮೂಲಕ ಗೆಲುವು ತಂದುಕೊಟ್ಟರು.
ಭಾರತ 42.1 ಓವರ್ ಮುಕ್ತಾಯಕ್ಕೆ 5 ವಿಕೆಟ್ ನಷ್ಟಕ್ಕೆ 261 ರನ್ ಬಾರಿಸಿ ಗೆಲುವಿನ ನಗೆ ಬೀರಿತು. ಟೀಂ ಇಂಡಿಯಾ ಪರ ರೋಹಿತ್ ಶರ್ಮಾ 17, ವಿರಾಟ್ ಕೊಹ್ಲಿ 17 ರಿಷಬ್ ಪಂತ್ ಅಜೇಯ 125 ರನ್, ಹಾರ್ದಿಕ್ ಪಾಂಡ್ಯ 71 ರನ್ ಬಾರಿಸಿದ್ದಾರೆ.
ಇಂಗ್ಲೆಂಡ್ ಪರ ಜೇಸನ್ ರಾಯ್ 41 ರನ್ ಗಳಿಸಿ ಪಾಂಡ್ಯ ಬೌಲಿಂಗ್ ನಲ್ಲಿ ಔಟಾದರೆ, ಜೋಸ್ ಬಟ್ಲರ್ 60 ರನ್ ಗಳಿಗೆ ಔಟಾದರು. ಮೋಯಿನ್ ಅಲಿ 34, ಓವರ್ಟೋನ್ 32 ರನ್ ಗಳಿಗೆ ಔಟಾದರು.
ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಹಾರ್ದಿಕ್ ಪಾಂಡ್ಯ 4, ಯಜುವೇಂದ್ರ ಚಹಾಲ್ 3, ಮೊಹಮ್ಮದ್ ಶಮಿ 2 ಹಾಗೂ ರವೀಂದ್ರ ಜಡೇಜಾ 1 ವಿಕೆಟ್ ಪಡೆದಿದ್ದಾರೆ.
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 2-1 ಅಂತರದಿಂದ ಸರಣಿ ಕೈವಶ ಮಾಡಿಕೊಂಡಿದೆ.