ಕೊಲಂಬೋ: ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು ತಾರಕಕ್ಕೇರಿದ್ದು, ಅಧ್ಯಕ್ಷ ಗೋಟಾಬಯ ವಿರುದ್ಧದ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ರಾಜೀನಾಮೆ ನೀಡಿದ್ದಾರೆ.
ರಾಜಕೀಯ ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಸರ್ವಪಕ್ಷ ಸರ್ಕಾರಕ್ಕೆ ದಾರಿ ಮಾಡಿಕೊಡುವ ನಿಟ್ಟಿನಲ್ಲಿ ತಾವು ರಾಜೀನಾಮೆ ನೀಡುತ್ತಿರುವುದಾಗಿ ವಿಕ್ರಮ ಸಿಂಘೆ ತಿಳಿಸಿದ್ದಾರೆ.
ಇದಕ್ಕೂ ಮುನ್ನ, ಲಂಕಾದ ರಾಜಕೀಯ ಬಿಕ್ಕಟ್ಟನ್ನು ಬಗೆಹರಿಸಲು ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಂಸತ್ ಸ್ಪೀಕರ್ ಸಭೆಗೂ ಮುನ್ನ ವಿಕ್ರಮ ಸಿಂಘೆ ಕೆಲವು ಪಕ್ಷದ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದರು.