ನವದೆಹಲಿ: ಬೆಂಗಳೂರು ಸ್ಫೋಟ ಪ್ರಕರಣದಲ್ಲಿ ಪಿಡಿಪಿ ಮುಖಂಡ ಅಬ್ದುಲ್ ನಾಸರ್ ಮದನಿ ಸೇರಿದಂತೆ ಆರೋಪಿಗಳ ವಿರುದ್ಧ ಹೊಸ ಸಾಕ್ಷ್ಯವನ್ನು ಪರಿಗಣಿಸುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‍ಗೆ ಮನವಿ ಮಾಡಿದೆ.
ಫೆÇೀನ್ ರೆಕಾಡಿರ್ಂಗ್ ಸೇರಿದಂತೆ ಸಾಕ್ಷ್ಯವನ್ನು ಪರಿಗಣಿಸಬೇಕು ಎಂದು ಆಗ್ರಹಿಸಲಾಗಿದೆ. ಸರ್ಕಾರದ ಮನವಿಯನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್ ಪ್ರಕರಣದ ಅಂತಿಮ ವಿಚಾರಣೆಗೆ ತಡೆ ನೀಡಿದೆ.
ಪ್ರಕರಣದಲ್ಲಿ ಹೊಸ ಸಾಕ್ಷ್ಯವನ್ನು ಪರಿಗಣಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಬೇಕೆಂಬ ಮನವಿಯನ್ನು ಕರ್ನಾಟಕ ಹೈಕೋರ್ಟ್ ಈ ಹಿಂದೆ ತಿರಸ್ಕರಿಸಿತ್ತು. ಇದರ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್, ನಿಖಿಲ್ ಗೋಯಲ್ ಅವರು ವಿಚಾರಣಾ ನ್ಯಾಯಾಲಯದಲ್ಲಿ ಪ್ರಾರಂಭವಾಗಲಿರುವ ಅಂತಿಮ ವಿಚಾರಣೆಗೆ ತಡೆ ಕೋರಿದರು. ಈ ಬೇಡಿಕೆಯನ್ನು ಸುಪ್ರೀಂ ಕೋರ್ಟ್ ಪೀಠ ಒಪ್ಪಿಕೊಂಡಿದೆ.
ಸರ್ಕಾರದ ಮನವಿಯನ್ನು ಆಲಿಸಿದ ಸುಪ್ರೀಂ ಕೋರ್ಟ್ ಪ್ರಕರಣದ 21 ಆರೋಪಿಗಳಿಗೆ ನೋಟಿಸ್ ಕಳುಹಿಸಿದೆ. ಹೊಸ ಸಾಕ್ಷ್ಯವನ್ನು ಪರಿಗಣಿಸುವ ಬಗ್ಗೆ ಎರಡು ವಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು. ವಿಚಾರಣೆ ಮುಗಿದ ಬಳಿಕವμÉ್ಟೀ ಅಂತಿಮ ವಾದ ಆಲಿಸಲಾಗುವುದು.
ಇದೇ ವೇಳೆ ಮದನಿ ಬಿಡುಗಡೆಗೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಕಳಮಸ್ಸೆರಿಯಲ್ಲಿ ಬಸ್‍ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ತಡಿಯಂವಿಟ ನಾಸೀರ್, ಸಾಬಿರ್ ಬುಹಾರಿ ಮತ್ತು ತಾಜುದ್ದೀನ್ ತಪ್ಪಿತಸ್ಥರೆಂದು ನ್ಯಾಯಾಲಯ ತೀರ್ಪು ನೀಡಿದೆ. ಸೋಮವಾರ ಅವರಿಗೆ ಶಿಕ್ಷೆ ಪ್ರಕಟವಾಗಲಿದೆ.
ಸುಪ್ರೀಂ ಕೋರ್ಟ್‍ನಿಂದ ಮದನಿಯ ಅಂತಿಮ ವಿಚಾರಣೆಗೆ ತಡೆ: ಹೊಸ ಪುರಾವೆಗಳನ್ನು ಪರಿಗಣಿಸಲು ಕರ್ನಾಟಕ ಸರ್ಕಾರದ ಕೋರಿಕೆಯನ್ನು ಮನ್ನಿಸಿದ ಸುಪ್ರೀಂ ಕೋರ್ಟ್:
0
ಜುಲೈ 29, 2022