ನವದೆಹಲಿ: ಗುಂಡಿನ ದಾಳಿಯಿಂದ ನಿಧನರಾದ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ (67) ಅವರಿಗೆ ಗೌರವಾರ್ಥ ಶನಿವಾರ ರಾಷ್ಟ್ರದಾದ್ಯಂತ ತ್ರಿವರ್ಣ ಧ್ವಜವನ್ನು ಅರ್ಧಕ್ಕೆ ಇಳಿಸಲು ನಿರ್ಧರಿಸಲಾಗಿದೆ.
ನವದೆಹಲಿ: ಗುಂಡಿನ ದಾಳಿಯಿಂದ ನಿಧನರಾದ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ (67) ಅವರಿಗೆ ಗೌರವಾರ್ಥ ಶನಿವಾರ ರಾಷ್ಟ್ರದಾದ್ಯಂತ ತ್ರಿವರ್ಣ ಧ್ವಜವನ್ನು ಅರ್ಧಕ್ಕೆ ಇಳಿಸಲು ನಿರ್ಧರಿಸಲಾಗಿದೆ.
ಕೇಂದ್ರ ಸರ್ಕಾರ ಶನಿವಾರ ಒಂದು ದಿನದ ಶೋಕಾಚರಣೆಯನ್ನು ಘೋಷಿಸಿದೆ.
ತ್ರಿವರ್ಣ ಧ್ವಜವಿರುವ ಎಲ್ಲ ಕಚೇರಿ, ಕಟ್ಟಡಗಳಲ್ಲಿ ಅರ್ಧಕ್ಕೆ ಇಳಿಸುವ ನಿರ್ಧಾರಕ್ಕೆ ಬರಲಾಗಿದೆ. ಮನರಂಜನೆ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಗೃಹ ಕಚೇರಿ ತಿಳಿಸಿದೆ.
ಪಶ್ಚಿಮ ಜಪಾನ್‌ನ ನಾರಾ ನಗರದಲ್ಲಿ ಚುನಾವಣೆ ಪ್ರಚಾರದ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಶಿಂಜೊ ಅಬೆ ಮೃತಪಟ್ಟಿದ್ದಾರೆ. ಇವರು ಜಪಾನ್‌ನ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.
ಶಿಂಜೊ ಅಬೆ ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಣೆ ಮಾಡಿದ್ದಾರೆ.