ನವದೆಹಲಿ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿಯಾಗುವ ಸಾಧ್ಯತೆ ಎಂದು ಹೇಳಲಾಗಿದೆ.
ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆ ಕುರಿತು ಹೇಳಿಕೆ ನೀಡಿದ್ದ ಅಮರಿಂದರ್ ಸಿಂಗ್ ಅವರಿಗೆ ಉನ್ನತ ಹುದ್ದೆ ನೀಡುವ ಬಗ್ಗೆ ಚರ್ಚೆ ನಡೆಯುತ್ತಿವೆ.
ಲಂಡನ್ನಲ್ಲಿ ಬೆನ್ನುಮೂಳೆ ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿರುವ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಅಲ್ಲಿಂದ ವಾಪಸ್ಸಾದ ಬಳಿಕ ತಮ್ಮ ಪಕ್ಷ ಪಂಜಾಬ್ ಲೋಕ ಕಾಂಗ್ರೆಸ್ ಅನ್ನು ಬಿಜೆಪಿಯೊಂದಿಗೆ ವಿಲೀನ ಮಾಡುವ ಬಗ್ಗೆ ಸ್ವತಃ ಅವರೇ ಬಹಿರಂಗಪಡಿಸಿದ್ದರು. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಸಿಂಗ್ ಕಾಂಗ್ರೆಸ್ ತೊರೆದ ನಂತರ ಪಿಎಲ್ ಸಿ ಪಕ್ಷವನ್ನು ಕಟ್ಟಿದ್ದರು.
ಎರಡು ಬಾರಿ ಸಿಎಂ, ಶಾಸಕರಾಗಿ ಹಾಗೂ 4 ಬಾರಿ ಸಂಸತ್ ಸದಸ್ಯರಾಗಿ ಆಯ್ಕೆಯಾದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಬಿಜೆಪಿ ಚಿಂತಿಸಿದೆ ಎನ್ನಲಾಗಿದೆ. ಇದೇ ಆಗಸ್ಟ್ 10 ರಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರವಧಿ ಮುಕ್ತಾಯಗೊಳ್ಳಲಿದೆ.
ಸದ್ಯ ಅಮರಿಂದರ್ ಸಿಂಗ್ ಅವರನ್ನು ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಲಂಡನ್ನಿಂದ ವಾಪಸ್ಸಾದ ಬಳಿಕ ಈ ಬಗ್ಗೆ ಸ್ಪಷ್ಟನೆ ಸಿಗಲಿದೆ.