ಮುಂಬೈ: ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾದಲ್ಲಿ ಮತ್ತೆ ಬಿರುಕು ಕಾಣಿಸಿಕೊಂಡಿದೆ.
ಮುಂಬೈ: ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾದಲ್ಲಿ ಮತ್ತೆ ಬಿರುಕು ಕಾಣಿಸಿಕೊಂಡಿದೆ.
ಸೇನಾ ಸಂಸದರ ಪೈಕಿ ಬಹುತೇಕರು ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವಂತೆ ಠಾಕ್ರೆ ಮೇಲೆ ಒತ್ತಡ ಹೇರಿದ್ದಾರೆ.
ಶಿವಸೇನಾ 18 ಲೋಕಸಭಾ ಹಾಗೂ ಮೂವರು ರಾಜ್ಯಸಭಾ ಸದಸ್ಯರನ್ನು ಹೊಂದಿದೆ.
ರಾಷ್ಟ್ರಪತಿ ಚುನಾವಣೆಯಲ್ಲಿ ಪಕ್ಷವು ಮುರ್ಮು ಅವರನ್ನು ಬೆಂಬಲಿಸಬೇಕು ಎಂದು ಬುಡಕಟ್ಟು ಸಮುದಾಯಕ್ಕೆ ಸೇರಿರುವ ಸಂಸದರಾದ ರಾಹುಲ್ ಶೆವಾಲೆ ಮತ್ತು ರಾಜೇಂದ್ರ ಗಾವಿತ್ ಅವರು ಉದ್ಧವ್ ಠಾಕ್ರೆಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.