ಉಪ್ಪಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆಯವರು ಭಾರತೀಯ ಸಂಸತ್ತಿನ ಮೇಲ್ಮನೆ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದಕ್ಕೆ ಶ್ರೀ ನಿತ್ಯಾನಂದ ಯೋಗಾಶ್ರಮ, ಕೊಂಡೆವೂರು ಮಠದ ಶ್ರೀಯೋಗಾನಂದ ಸರಸ್ವತೀ ಸ್ವಾಮೀಜಿಯವರು ಸಂತಸ ವ್ಯಕ್ತ ಪಡಿಸಿದ್ದಾರೆ. ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಹೆಗ್ಗಡೆಯವರ ಜನಪರ ಕಾರ್ಯ ಕಾಳಜಿಯಿಂದ ಕೂಡಿದ್ದು, ಇದು ದೇಶದಾದ್ಯಂತ ವ್ಯಾಪಿಸುವುದಕ್ಕೆ ಇದೊಂದು ಉತ್ತಮ ಅವಕಾಶವಾಗಿ ಒದಗಿ ಬಂದಿದೆ ಮತ್ತು ಕೇಂದ್ರಸರಕಾರವು ರಾಜ್ಯಸಭೆಗೆ ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡುವ ಮೂಲಕ ಸಾಮಾಜಿಕ ಬದ್ಧತೆಯನ್ನು ತೋರಿದೆ ಎಂದು ಶ್ರೀಗಳವರು ಅಭಿಪ್ರಾಯಪಟ್ಟಿದ್ದಾರೆ.