ಮಂಗಳೂರು: ಕೇವಲ 10 ದಿನಗಳ ಅಂತರದಲ್ಲಿ ಮೂವರ ಬರ್ಬರ ಹತ್ಯೆಯಿಂದ ನಲುಗಿರುವ ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಸಮ್ಮುಖದಲ್ಲಿ ಇಂದು ಶಾಂತಿ ಪಾಲನಾ ಸಭೆ ನಡೆಯಿತು. ಮುಸ್ಲಿಂ ಮುಖಂಡರು ಸೇರಿದಂತೆ ಎಲ್ಲಾ ಸಮುದಾಯಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಪಾಲ್ಗೊಂಡರು.
ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಲೋಕ್ ಕುಮಾರ್, ಸರ್ವ ಧರ್ಮೀಯರ ಶಾಂತಿ ಪಾಲನಾ ಸಭೆಯಲ್ಲಿ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಯಿತು. ನಮ್ಮೊಂದಿಗೆ ಸಹಕರಿಸುವಂತೆ ಅವರಿಗೆ ಮನವಿ ಮಾಡಿದ್ದೇವೆ. ಆದ್ದರಿಂದ ಈ ಪ್ರದೇಶದಲ್ಲಿ ಶಾಂತಿ ಹದಗೆಡುವುದಿಲ್ಲ. ಯುವಕನ ಹತ್ಯೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಯಾರನ್ನು ಬಂಧಿಸಿಲ್ಲ, ಆದರೆ, ಶಂಕಿತರನ್ನು ವಿಚಾರಿಸಲಾಗುತ್ತಿದೆ ಎಂದು ತಿಳಿಸಿದರು.
ಶಾಂತಿ ಪಾಲನಾ ಸಭೆಯಲ್ಲಿ ಮುಸ್ಲಿಂ ಮುಖಂಡರು ಸೇರಿದಂತೆ ಎಲ್ಲ ಧರ್ಮಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಆದರೆ, ಮುಸ್ಲಿಂ ಮುಖಂಡರಿಂದ ಮತ್ತೊಂದು ಸಭೆ ನಡೆದಿದೆ. ಎಲ್ಲಾ ಸಮುದಾಯಗಳ ಮುಖಂಡರನ್ನು ಭೇಟಿ ಮಾಡಿದ್ದು, ಅವುಗಳ ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದರು. https://twitter.com/ANI/status/1553359787152506880?s=20&t=9h24YX9n4Hn3FTiV0ps9xg
https://
Thread
Conversation
.com/ANI/status/1553359787152506880?s=20&t=9h24YX9n4Hn3FTiV0ps9xg