ಉಪ್ಪಳ: ಅರಣ್ಯ ಮತ್ತು ವನ್ಯಜೀವಿ ಇಲಾಖೆ ಆಯೋಜಿಸಿದ್ದ ವನಮಹೋತ್ಸವ 2022ರ ಅಂಗವಾಗಿ ಕಾಸರಗೋಡು ಸಾಮಾಜಿಕ ಅರಣ್ಯ ಇಲಾಖೆ ಹಾಗೂ ಮಂಗಲ್ಪಾಡಿ ತಾಲೂಕು ಆಸ್ಪತ್ರೆ ವತಿಯಿಂದ ಆಸ್ಪತ್ರೆ ಆವರಣದಲ್ಲಿ ಮಕ್ಕಳ ವನ ಸಿದ್ಧಪಡಿಸಲಾಯಿತು. ಮಕ್ಕಳ ವನ ಸಿದ್ಧಪಡಿಸಿದ ಯೋಜನೆಯಲ್ಲಿ 71 ದಾಳಿಂಬೆ ಸಸಿಗಳನ್ನು ನೆಟ್ಟಿದ್ದು, ಬ್ಲಾಕ್ ಪಂಚಾಯಿತಿ ಅಧ್ಯಕ್ಷೆ ಶಮೀನಾ ಟೀಚರ್ ಉದ್ಘಾಟಿಸಿದರು. ಕಾಸರಗೋಡು ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ. ಧನೇಶ್ಕುಮಾರ್, ಮಂಜೇಶ್ವರ ಬ್ಲಾಕ್ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಶಂಸೀನಾ, ಮಂಗಲ್ಪಾಡಿ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಇರ್ಫಾನಾ ಇಕ್ಬಾಲ್, ವಾರ್ಡ್ ಸದಸ್ಯ ಬಾಬು ಬಂದ್ಯೋಡು, ತಾಲೂಕು ಆಸ್ಪತ್ರೆ ಅಧೀಕ್ಷಕಿ ಕೆ.ಕೆ.ಶಾಂತಿ, ಸಾಮಾಜಿಕ ಅರಣ್ಯ ವಲಯ ಅರಣ್ಯಾಧಿಕಾರಿ ಕೆ.ವಿ.ಅರುಣೇಶ್, ವಲಯ ಅರಣ್ಯಾಧಿಕಾರಿ ನಾರಾಯಣ ನಾಯ್ಕ್, ಕೆ.ಕೆ. ಬಾಲಕೃಷ್ಣನ್ ಮಾತನಾಡಿದರು.