ಸಮರಸ ಚಿತ್ರಸುದ್ದಿ: ಕುಂಬಳೆ : ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವತಿಯಿಂದ ರಾಜ್ಯ ಸಭೆಗೆ ನಾಮ ನಿರ್ದೇಶನ ಸದಸ್ಯರಾಗಿ ನಿಯುಕ್ತಿಗೊಂಡ ರಾಜರ್ಷಿ, ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಕಣಿಪುರ ಶ್ರೀ ಗೋಪಾಲಕೃಷ್ಣ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶ ಸಮಿತಿಯ ಪರವಾಗಿ ಸಮಿತಿಯ ಅಧ್ಯಕ್ಷ ಬಿ. ರಘುನಾಥ ಪೈ ಅವರು ಶಾಲು ಹಾಗೂ ಫಲ ಪುಷ್ಪಗಳನ್ನು ನೀಡಿ ಅಭಿನಂದಿಸಿದರು .ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.