ನವದೆಹಲಿ: ಸಮಯ ವ್ಯರ್ಥ ಮಾಡದೆ ತಕ್ಷಣ ಕೋವಿಡ್-19 ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.
ನವದೆಹಲಿ: ಸಮಯ ವ್ಯರ್ಥ ಮಾಡದೆ ತಕ್ಷಣ ಕೋವಿಡ್-19 ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.
ಪರಿಹಾರ ದೊರೆಯದಿರುವ ಬಗ್ಗೆ ದೂರುಗಳಿದ್ದಲ್ಲಿ ಕುಂದು ಕೊರತೆ ನಿವಾರಣಾ ಸಮಿತಿಗೆ ನೀಡಬಹುದು.
ರಾಜ್ಯ ವಿಪತ್ತು ಸ್ಪಂದನಾ ಪಡೆಯ (ಎಸ್‌ಡಿಆರ್‌ಎಫ್) ನಿಧಿಯಿಂದ ವೈಯಕ್ತಿಕ ಖಾತೆಗಳಿಗೆ ಹಣ ವರ್ಗಾವಣೆ ಮಾಡಲು ಆಂಧ್ರ ಪ್ರದೇಶ ಸರ್ಕಾರಕ್ಕೆ ಸೂಚಿಸಬೇಕು ಎಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು. ಇನ್ನು ಎರಡು ದಿನದಲ್ಲಿ ಎಸ್‌ಡಿಆರ್‌ಎಫ್ ನಿಧಿಗೆ ಹಣ ವರ್ಗಾವಣೆ ಮಾಡಬೇಕು ಎಂದು ಆಂಧ್ರ ಪ್ರದೇಶ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿತು.
ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ನ್ಯಾಯಾಲಯವು ಆಂಧ್ರ ಪ್ರದೇಶ ಸರ್ಕಾರಕ್ಕೆ ಕೊನೆಯ ಅವಕಾಶ ನೀಡಿತ್ತು. ಜತೆಗೆ, ಎಸ್‌ಡಿಆರ್‌ಎಫ್ ನಿಧಿಯನ್ನು ಬೇರೆ ಯಾವುದೇ ಯೋಜನೆಗೂ ಬಳಸದಂತೆ ಹೇಳಿತ್ತು. ಆಂಧ್ರ ಪ್ರದೇಶ ಸರ್ಕಾರವು ಎಸ್‌ಡಿಆರ್‌ಎಫ್ ನಿಧಿಯನ್ನು ಬೇರೆಡೆ ಬಳಸುತ್ತಿದೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಹೇಳಲಾಗಿತ್ತು.