ಮುಂಬೈ: ಇದೇ ತಿಂಗಳ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ಶಿವಸೇನೆ ತೀರ್ಮಾನಿಸಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆ, ಯಾವುದೇ ಒತ್ತಡವಿಲ್ಲದೆ ಮುರ್ಮು ಅವರನ್ನು ಬೆಂಬಲಿಸಲು ಶಿವಸೇನಾ ನಿರ್ಧರಿಸಿರುವುದಾಗಿ ತಿಳಿಸಿದರು. ಶಿವಸೇನಾ ಸಂಸದರ ಸಭೆಯಲ್ಲಿ ಯಾರೂ ಕೂಡಾ ನನ್ನಗೆ ಒತ್ತಡ ಹಾಕಲಿಲ್ಲ ಎಂದು ಅವರು ಹೇಳಿದರು.
ಇದೇ ಮೊದಲ ಬಾರಿಗೆ ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರು ರಾಷ್ಟ್ರಪತಿಯಾಗುವ ಅವಕಾಶವಿರುವುದಾಗಿ ಪಕ್ಷದ ಬುಡಕಟ್ಟು ಮುಖಂಡರು ಹೇಳಿರುವುದಾಗಿ ತಿಳಿಸಿದರು. ಪ್ರಸ್ತುತ ನಡೆಯುತ್ತಿರುವ ರಾಜಕೀಯ ಪರಿಸ್ಥಿತಿಯಲ್ಲಿ ನಾನು ಮುರ್ಮು ಅವರನ್ನು ಬೆಂಬಲಸಬಾರದು. ಆದರೆ, ನಾವು ಸಣ್ಣ ಮನಸ್ಥಿತಿ ಹೊಂದಿಲ್ಲ ಎಂದರು.