ತಿರುವನಂತಪುರ: ರಾಜ್ಯದಲ್ಲಿ ಇಂದು ರಾತ್ರಿ ವ್ಯಾಪಕ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹದಿನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಹವಾಮಾನ ಕೇಂದ್ರದ ಪ್ರಕಾರ, ಅರಬ್ಬಿ ಸಮುದ್ರದಲ್ಲಿನ ಕಡಿಮೆ ಒತ್ತಡ ಮತ್ತು ಒಡಿಶಾ ಕರಾವಳಿಯಲ್ಲಿ ಕಡಿಮೆ ಒತ್ತಡದ ಪ್ರಭಾವದಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ.
ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕಡಿಮೆ ಒತ್ತಡದ ಪ್ರಭಾವದಿಂದ ರಾಜ್ಯದಲ್ಲಿ ಮಳೆ ತೀವ್ರಗೊಳ್ಳುತ್ತಿದೆ. ದಕ್ಷಿಣ ಜಿಲ್ಲೆಗಳಲ್ಲಿ ಹಿಂದಿನ ದಿನಗಳಿಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ನಾಳೆ ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ 5 ದಿನಗಳ ಕಾಲ ಮಳೆಯ ಮುನ್ಸೂಚನೆ
13-07-2022: ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು, ಕಾಸರಗೋಡು
14-07-2022: ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು, ಕಾಸರಗೋಡು
15-07-2022: ತಿರುವನಂತಪುರ, ಕೊಲ್ಲಂ, ಆಲಪ್ಪುಳ, ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು, ಕಾಸರಗೋಡು
16-07-2022: ಎರ್ನಾಕುಳಂ, ತ್ರಿಶೂರ್, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಯೆಲ್ಲೋ ಎಚ್ಚರಿಕೆ ನೀಡಿದೆ.