ಬದಿಯಡ್ಕ: ಕಾಸರಗೋಡು ಜಿಲ್ಲೆಯ ನೀರ್ಚಾಲು ಸಮೀಪದ ಕುಂಟಿಕಾನ ಶಂಕರಮೂಲೆಯಲ್ಲಿರುವ ನಿಡುಗಳ ವೆಂಕಟಕೃಷ್ಣ ಮತ್ತು ಜಯಶ್ರೀ ಇವರ ಪುತ್ರಿ ದಿವ್ಯಶ್ರೀ ಮನೋವೈದ್ಯಕೀಯ ವಿಭಾಗ ಸ್ನಾತಕೋತ್ತರ ಶಿಕ್ಷಣದಲ್ಲಿ ಕರ್ನಾಟಕ ರಾಜ್ಯಕ್ಕೆ ಪ್ರಥಮ ರ್ಯಾಂಕ್ ನೊಂದಿಗೆ ಚಿನ್ನದ ಪದಕ ಪಡೆದಿರುತ್ತಾರೆ. ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಎಂ.ಬಿ.ಬಿ.ಎಸ್. ಪೂರೈಸಿದ ಇವರು ಧಾರವಾಡದ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆಯಲ್ಲಿ ಎಂ.ಡಿ. ಮನೋವೈದ್ಯಕೀಯ ವಿಭಾಗದಲ್ಲಿ ಸ್ನಾತಕೋತ್ತರ ಶಿಕ್ಷಣವನ್ನು 72.5 ಶೇ. ಅಂಕದೊಂದಿಗೆ ಪೂರ್ಣಗೊಳಿಸಿ ಕರ್ನಾಟಕ ರಾಜ್ಯದಲ್ಲಿಯೇ ಪ್ರಥಮ ಸ್ಥಾನವನ್ನು ಪಡೆದು, ರಾಜೀವ್ ಗಾಂಧಿ ವಿಶ್ವ ವಿದ್ಯಾಲಯದಲ್ಲಿ ಚಿನ್ನದ ಪದಕ ಗಳಿಸಿರುತ್ತಾರೆ.